Tuesday, November 28, 2023
spot_img
- Advertisement -spot_img

`ಬೊಮ್ಮಾಯಿ ಅಂಕಲ್, ದಯವಿಟ್ಟು ನಮ್ಮ ಪರಿಸರವನ್ನು ರಕ್ಷಿಸಿ : ವಿದ್ಯಾರ್ಥಿಗಳಿಂದ ಸಿಎಂಗೆ ಪತ್ರ

ಬೆಂಗಳೂರು: `ಆತ್ಮೀಯ ಬೊಮ್ಮಾಯಿ ಅಂಕಲ್, ದಯವಿಟ್ಟು ನಮ್ಮ ಪರಿಸರವನ್ನು ರಕ್ಷಿಸಿ. ನಾವು ಆರೋಗ್ಯಕರ ಮತ್ತು ಸುರಕ್ಷಿತ ವಾತಾವರಣದಲ್ಲಿ ಕಲಿಯಲು ಮತ್ತು ಒಟ್ಟಿಗೆ ಆಡಲು ಬಯಸುತ್ತೇವೆ’ ಎಂದು ಬರೆದು ಪುಟ್ಟ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದ್ದು, ಜನರಿಗೆ ತೊಂದರೆಯಾಗುತ್ತಿದೆ. ಇದೀಗ ಬೆಂಗಳೂರಿನ ಮೇಲ್ಸೇತುವೆ ಯೋಜನೆ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೂ ಈ ಯೋಜನೆ ಪರಿಸರಕ್ಕೆ ಮಾರಕ ಎಂದು ಸ್ಯಾಂಕಿ ಕೆರೆ ಉಳಿವಿಗಾಗಿ ಪರಿಸರವಾದಿಗಳು, ಸ್ಥಳೀಯರು ಜೊತೆಗೆ ಈಗ ಶಾಲಾ ಮಕ್ಕಳು ಪಣ ತೊಟ್ಟಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಉದ್ದೇಶಿತ ಸ್ಯಾಂಕಿ ರೋಡ್ ವಿಸ್ತರಣೆ ಹಾಗೂ ಮೇಲ್ಸೇತುವೆ ನಿರ್ಮಾಣ ಮಾಡಲು ಬಿಬಿಎಂಪಿ ಹೊರಟಿದೆ. ನಗರದ ಸುಮಾರು 2 ಸಾವಿರಕ್ಕೂ ಹೆಚ್ಚು ಮಕ್ಕಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು, ಉದ್ದೇಶಿತ ಸ್ಯಾಂಕಿ ರೋಡ್ ಮೇಲ್ಸೇತುವೆ ನಿಲ್ಲಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಕನ್ನಡ ಮತ್ತು ಆಂಗ್ಲಭಾಷೆಗಳಲ್ಲಿ ಪತ್ರ ಬರೆದು ಮುಖ್ಯಮಂತ್ರಿಗಳಿಗೆ ಪತ್ರ ಕಳುಹಿಸಿದ್ದಾರೆ.

Related Articles

- Advertisement -spot_img

Latest Articles