ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಘೀ ಜ್ವರ ಪ್ರಕರಣಗಳಲ್ಲಿ ದಿಡೀರ್ ಏರಿಕೆ ಕಂಡಿದ್ದು, ಈವರೆಗೆ ಏಳು ಜನ ಮಾರಕ ಜ್ಚರಕ್ಕೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ನಗರದಲ್ಲಿ ಮಳೆ ಕಣ್ಣಾಮುಚ್ಚಾಲೆ ಆಡುತ್ತಿದ್ದು, ಒಮ್ಮೆ ಮಳೆ ಬಂದರೆ ಮತ್ತೊಮ್ಮೆ ಮಳೆ ಸುರಿಯಲು ಹೆಚ್ಚು ಸಮಯ ತೆಗೆದುಕೊಳ್ಳುತ್ತಿರುವ ಪರಿಣಾಮ ಡೆಂಘೀ ಸೊಳ್ಳೆಗಳ ಸಂಖ್ಯೆಯಲ್ಲಿ ಏರುಗತಿ ಕಾಣುತ್ತಿದೆ ಎನ್ನಲಾಗಿದೆ.
ನಗರದಲ್ಲಿ ಡೆಂಘೀ ಪ್ರಕರಣ ಹೆಚ್ಚಾಗುತ್ತಿರುವುದರಿಂದ ನಮ್ಮ ಕ್ಲಿನಿಕ್‌ಗಳು ರಾತ್ರಿ ಎಂಟು ಗಂಟೆವರೆಗೂ ಕೆಲದ ಮಾಡಲು ಬಿಬಿಎಂಪಿ ನಿರ್ಧಾರ ಮಾಡಿದೆ ಎನ್ನಲಾಗಿದೆ. ಮಧ್ಯಾಹ್ನ 12 ರಿಂದ ಎಂಟು ಗಂಟೆವರೆಗೆ ಕ್ಲಿನಿಕ್‌ನಲ್ಲಿ ಸಿಬ್ಬಂದಿ ಕೆಲಸ ನಿರ್ವಹಿಸಲಿದ್ದಾರೆ. ಬೆಳಗ್ಗೆ 8 ರಿಂದ ಸಂಜೆ 4 ರ ವರೆಗೂ ಲ್ಯಾಬ್ ಟೆಕ್ನಿಷಿಯನ್ ಕೆಲಸ ನಿರ್ವಹಿಸಲಿದ್ದಾರೆ. ಡೆಂಘೀ ಜ್ವರಕ್ಕೆ ಬೆಂಗಳೂರಿನಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಮರಣ ಹೊಂದಿರುವ ಮೂವರ ಲ್ಯಾಬ್ ವರದಿ ಬರುವುದು ಇನ್ನೂ ಬಾಕಿ ಇದೆ.
ಇದನ್ನೂ ಓದಿ; ಪೊಯಿಲಾ ಬೈಸಾಖ್ ‘ಬಂಗಾಳ ದಿನ’ವಾಗಿ ನಿರ್ಣಯ ಅಂಗೀಕಾರ
ಮಳೆಗಾಲದಲ್ಲಿ ಡೆಂಘೀ ಪ್ರಕರಣ ಏರಿಕೆ ಆಗ್ತಾ ಇದೆ. ಇದಕ್ಕೆ ಕಡಿವಾಣ ಹಾಕಲು ಅಗತ್ಯ ಇರುವ ಕ್ರಮ ಕೈಗೊಳ್ಳಲು ಸೂಚನೆ ಕೊಟ್ಟಿದ್ದೇನೆ. ಪರೀಕ್ಷೆ ಹೆಚ್ಚು ಮಾಡುವಂತೆ ನಿರ್ದೇಶನ ನೀಡಿದ್ದೇನೆ. ನಮ್ಮ ಕ್ಲಿನಿಕ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಂಗ್ರಹಿಸುವ ಸ್ಯಾಂಪಲ್ ಟೆಸ್ಟ್ ಮಾಡಲು ಸೂಚನೆ ಕೊಟ್ಟಿದ್ದೇನೆ; ಇದಕ್ಕೆ ಹೆಚ್ಚುವರಿ ಹಣದ ಅಗತ್ಯವಿದೆ. ಪೂರಕವಾಗಿ ಬೇಕಾಗಿರುವ ಹಣವನ್ನು ನಮ್ಮ ಇಲಾಖೆಯಿಂದ ಒದಗಿಸುವ ಪ್ರಯತ್ನ ಮಾಡ್ತೀವಿ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
‘ಪಾಲಿಕೆ ವ್ಯಾಪ್ತಿಯಲ್ಲಿ ಸಿಬ್ಬಂದಿ ಕೊರತೆ ಹೆಚ್ಚಿದೆ. ಹೀಗಾಗಿ, ಈಗ ಕೆಲಸ ಮಾಡುತ್ತಿರುವವರಿಗೆ ಸಂಬಳ ಹೆಚ್ಚು ಮಾಡಲು ತೀರ್ಮಾನ ಮಾಡಿದ್ದೇವೆ. ಸದ್ಯ ಅವರಿಗೆಲ್ಲಾ ₹12 ಸಾವಿರ ಸಂಬಳ ಇದೆ; ₹6 ಸಾವಿರ ಏರಿಕೆ ಮಾಡಲು ನಿರ್ಧಾರ ಮಾಡಿದ್ದೇವೆ. ಬೆಂಗಳೂರನ್ನು ಹೆಲ್ತ್ ಯೂನಿಟ್ ಅಂತ ಪರಿಗಣನೆ ಮಾಡಲು ನಿರ್ಧಾರ ಮಾಡಲಾಗಿದೆ’ ಎಂದರು.
ಇದನ್ನೂ ಓದಿ; ಗೃಹಲಕ್ಷ್ಮಿ ನೋಂದಣಿ ಸ್ಥಗಿತವಾಗಿಲ್ಲ; ಸಚಿವೆ ಹೆಬ್ಬಾಳ್ಕರ್ ಸ್ಪಷ್ಟನೆ!
‘ಡೆಂಘೀ ಮಾನಿಟರಿಂಗ್ ಆ್ಯಪ್ ಬಿಡುಗಡೆ ಮಾಡಲು ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆ ಸಿದ್ಧವಿದೆ. ಬೆಂಗಳೂರು ನಗರಕ್ಕೆ ಮಾತ್ರ ಈ ಆ್ಯಪ್ ರೆಡಿ ಮಾಡಿದ್ದೇವೆ. ನಾಳೆ ಈ ಆ್ಯಪ್ ಲಾಂಚ್ ಮಾಡಲು ನಿರ್ಧರಿಸಿದ್ದೇವೆ’ ಎಂದು ಮಾಹಿತಿ ನೀಡಿದರು.