ಚಿಕ್ಕಬಳ್ಳಾಪುರ: ಸುಧಾಕರ್ ಅವರ ಹಣದ ದಾಹ ಪ್ರತಿ ಹಳ್ಳಿಗೂ ಗೊತ್ತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಜನರಿಗೆ ಟಿವಿ, ರೆಫ್ರಿಜರೇಟರ್, ಸ್ಟೌವ್ ಎಲ್ಲವನ್ನೂ ಕೊಟ್ಟಿದ್ದಾರೆ ಪಾಪ ಆರೋಗ್ಯ ಸಚಿವರು ಸಂಪಧ್ಭರಿತರಾಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಇವರು ಇಷ್ಟೆಲ್ಲ ಮಾಡಿದ್ದಾರಲ್ಲ ಎಂಬುದಾಗಿ ಜನರು ಈ ಬಾರಿ ಮನೆಯಲ್ಲೇ ಕುಳಿತುಕೊಳ್ಳುವಂತೆ ಮಾಡಿದರೆ? ಆಗ ರಾಜೀನಾಮೆ ಕೊಡುವ ಪ್ರಶ್ನೆಯೇ ಬರುವುದಿಲ್ಲವಲ್ಲಾ? ಆ ರೀತಿ ಆದರೆ ಅವರು ಏನು ಮಾಡುತ್ತಾರೆ, ಸ್ವಲ್ಪ ಎಚ್ಚರಿಕೆಯಿಂದ ಇದ್ದರೆ ಒಳ್ಳೆಯದು ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ ನೂರು ಸೀಟ್ ಬಂದರೇ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸವಾಲು ಹಾಕಿದ್ದರು.
ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ,ಜೆಡಿಎಸ್ ಅಧಿಕಾರಕ್ಕೆ ಬರಲ್ಲ. ಸ್ಪಷ್ಟಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ. ಈ ಬಾರಿ ರಾಜ್ಯದಲ್ಲಿ ಅತಂತ್ರ ಸ್ಥಿತಿ ಬರಲ್ಲ. ಅತಂತ್ರ ಸ್ಥಿತಿ ಬರಲು ಜನರು ಅವಕಾಶ ನೀಡಲ್ಲ ರಾಜ್ಯದ ಜನತೆ ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿ ನರೇಂದ್ರ ಮೋದಿಯವರ ಕೈ ಬಲಪಡಿಸಲಿದ್ದಾರೆ ಎಂದು ಹೇಳಿದ್ದರು.