Monday, March 20, 2023
spot_img
- Advertisement -spot_img

ರಾಜ್ಯ ಸರ್ಕಾರ ರೋಗ ಹರಡುವಿಕೆ ತಡೆಯಲು ಅನೇಕ ಕ್ರಮ ವಹಿಸಿದೆ: ಸಚಿವ ಸುಧಾಕರ್

ತುಮಕೂರು: ಅಮೆರಿಕ , ಚೀನಾ ದೇಶಗಳಲ್ಲಿ ಬಿಎಫ್‌ 7 ಕಂಡುಬಂದಿದೆ. ಇದು ನಮ್ಮ ದೇಶವನ್ನು ಕೂಡ ಪ್ರವೇಶಿಸುವ ಸಾಧ್ಯತೆಗಳಿದೆ. ಹೀಗಾಗಿ, ಜಾಗೃತೆ ವಹಿಸಬೇಕು ಎಂದು ಆರೋಗ್ಯ ಖಾತೆ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಕೊರಟಗೆರೆ ತಾಲೂಕಿನಲ್ಲಿ ನೂತನ ಪ್ರಾಥಮಿಕ ಚಿಕಿತ್ಸಾ ಕೇಂದ್ರವನ್ನು ಉದ್ಘಾಟನೆ ಮಾಡಿ ಮಾತನಾಡಿ,
ಚೀನಾ, ಅಮೆರಿಕ, ಜಪಾನ್ ಸೇರಿದಂತೆ ಅನೇಕ ದೇಶಗಳಲ್ಲಿ ಕೋವಿಡ್ ಹರಡುತ್ತಿದ್ದು ದೇಶದಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಮುಂದಿನ ಇನ್ನೆರಡು ತಿಂಗಳಲ್ಲಿ ಈ ಹೊಸ ತಳಿ ಬಿಎಫ್‌ 7 ದೇಶ ಪ್ರವೇಶಿಸಲಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಕೂಡ ರೋಗ ಹರಡುವಿಕೆ ತಡೆಯಲು ಅನೇಕ ಕ್ರಮಗಳನ್ನು ಕೈಗೊಂಡಿದೆ. ಕೇರಳ ರಾಜ್ಯದಲ್ಲಿ ಅಲ್ಲಿನ ಸರ್ಕಾರವು ನಿಮ್ಮ ಆರೋಗ್ಯ ನಿಮ್ಮ ಬಳಿ ಇದೆ ಎಂದು ಹೇಳುತ್ತಿದೆ. ಆದರೆ ನಮ್ಮ ರಾಜ್ಯದಲ್ಲಿ ನಿಮ್ಮ ಆರೋಗ್ಯ ನಮ್ಮ ಬಳಿ ಇದೆ ಎಂದು ಹೇಳುತ್ತಾ ಜನರ ಆರೋಗ್ಯವನ್ನು ಕಾಪಾಡುತ್ತಿದ್ದೇವೆ ಎಂದು ಹೇಳಿದರು. ಹೊಸ ತಳಿ ಬಗ್ಗೆ ಆಲಸ್ಯ ಮಾಡಬಾರದು. ಪ್ರತಿಯೊಬ್ಬರೂ ಬೂಸ್ಟರ್‌ ಡೋಸ್‌ ತೆಗೆದುಕೊಳ್ಳಬೇಕು. ಸ್ವಚ್ಛತೆ ಕಾಪಾಡಿಕೊಂಡು ನಮ್ಮ ಆರೋಗ್ಯವನ್ನು ನಾವು ರಕ್ಷಣೆ ಮಾಡಿಕೊಳ್ಳಬೇಕು.

ನಮ್ಮ ರಾಜ್ಯದಲ್ಲಿ ಇದುವರೆಗೆ 12 ಕೋಟಿ ಲಸಿಕೆ ನೀಡಲಾಗಿದೆ. ಶೇಕಡಾ 100 ರಷ್ಟು 2 ನೇ ಡೋಸ್ ನೀಡಲಾಗಿದೆ. ಇದೀಗ ಜನರು ಮೂರನೇ ಬೋಸ್ಟರ್ ಡೋಸ್ ಹಾಕಿಸಿಕೊಳ್ಳಬೇಕು, ಆಗ ಮಾತ್ರ ಉಪತಳಿಯಿಂದ ರಕ್ಷಣೆ ಸಿಗುತ್ತದೆ ಎಂದರು.ಸಾರ್ವಜನಿಕರು ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಬಳಕೆ ಮಾಡುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮುಂದುವರಿಸಬೇಕು ಎಂದು ಸಲಹೆ ನೀಡಿದರು.

Related Articles

- Advertisement -

Latest Articles