Wednesday, May 31, 2023
spot_img
- Advertisement -spot_img

ನಂದಿನಿ ಅಂದ್ರೆ ಕಾಂಗ್ರೆಸ್, ಬಿಜೆಪಿ ಅಂದ್ರೆ ಅಮೂಲ್?: ಸಚಿವ ಸುಧಾಕರ್

ಬೆಂಗಳೂರು:ಹಾಲು ಉತ್ಪಾದಕರಿಗೆ ಈಗಾಗಲೇ ನಮ್ಮ ಸರ್ಕಾರ ಪ್ರೋತ್ಸಾಹ ಧನ ಕೊಡುತ್ತಿದೆ. ಪ್ರತಿ ಲೀಟರ್ ಹಾಲಿಗೆ ಎರಡು ರೂಪಾಯಿ ಪ್ರೋತ್ಸಾಹ ಧನ ಕೊಟ್ಟಿದ್ದೇ ನಾವು ಎಂದು ಸಚಿವ ಡಾ ಕೆ ಸುಧಾಕರ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಮೂಲ್ ಅಂದರೆ ಬಿಜೆಪಿ, ನಂದಿನಿ ಅಂದ್ರೆ ಕಾಂಗ್ರೆಸಾ ಎಂದು ಪ್ರಶ್ನಿಸಿದರು. ನಂದಿನಿ ಹಾಲನ್ನು ಕೇವಲ ಕರ್ನಾಟಕಕ್ಕೆ ಸೀಮಿತ ಮಾಡಬೇಡಿ. ದೆಹಲಿಯಲ್ಲಿ ಕೂಡ ಮಾರಾಟ ಮಾಡಲಿಕ್ಕೆ ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ಇನ್ನೂ ಅಮುಲ್ ಜತೆ ನಂದಿನಿ ವಿಲೀನ,ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ ನಡೆದಿದೆ 3ನೇ ಸಂಚು ಎಂದು ವಿರೋಧಿಸಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ “ನಂದಿನಿ” ಅನ್ನು ಗುಜರಾತ್‌ನ ಅಮುಲ್‌ಗೆ ಮಾರಾಟ ಮಾಡುವ ಬಿಜೆಪಿಯ ಷಡ್ಯಂತ್ರ ಈಗ ಸ್ಪಷ್ಟವಾಗಿದೆ ನಂದಿನಿ ಉಳಿಸಿ, ಬಿಜೆಪಿ ಓಡಿಸಿ ಎಂದು ಟ್ವೀಟ್ ಮಾಡಿದ್ದಾರೆ.


Related Articles

- Advertisement -

Latest Articles