ಬೆಂಗಳೂರು: ನನ್ನ ಎಲ್ಲ ನಿರ್ಧಾರವನ್ನು ಮಂಡ್ಯದ ಜನತೆ ಮುಂದೆ ಹೇಳುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ತಿಳಿಸಿದರು. ನಗರದ ಖಾಸಗಿ ಹೋಟೆಲೊಂದರಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಸುಮಲತಾ , ಏನೆಲ್ಲಾ ಮಾತುಕತೆ ನಡೆಸಿದ್ದಾರೆ ಎಂದು ಗುಟ್ಟು ಬಿಟ್ಟುಕೊಟ್ಟಿಲ್ಲ.
ಮಂಡ್ಯದ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ತಾರೆ ಎಂದು ಜೆಡಿಎಸ್ ಶಾಸಕ ಸಿ.ಎಸ್.ಪುಟ್ಟರಾಜು ಸುಳಿವು ನೀಡಿದ್ದರು. ಅದರಂತೆ ಇಂದು ಸುಮಲತಾ ಸುದ್ದಿ ಗೋಷ್ಠಿ ನಡೆಸಿ ಎಲ್ಲ ವಿಚಾರ ಹಂಚಿಕೊಳ್ಳಲಿದ್ದಾರೆ. ಈ ಮಧ್ಯೆ ಸುಮಲತಾ ಅಂಬರೀಶ್ ಸುದ್ದಿಗೋಷ್ಠಿ ಕರೆದಿದ್ದು, ಅಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆ ಬಗ್ಗೆ ಘೋಷಿಸುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಇಂದು ಆಪ್ತ ಮೂಲದವರೊಂದಿಗೆ ಅಭಿಪ್ರಾಯ ಸಂಗ್ರಹಿಸಿ ಆ ನಂತರ ಬಿಜೆಪಿ ಸೇರೋದಾ ಇಲ್ವಾ ? ಎಂದು ನಿರ್ಧರಿಸಲಿದ್ದಾರೆ.
ಬಿಜೆಪಿಗೆ ಸುಮಲತಾ ಬಂದರೆ ಅನುಕೂಲವಾಗಲಿದೆ ಅನ್ನೋದು ಸುಮಲತಾ ಬೆಂಬಲಿಗರ ಲೆಕ್ಕಾಚಾರವಾಗಿದೆ. ಅಂದಹಾಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಪ್ರಕ್ರಿಯೆ ಪ್ರಗತಿಯಲ್ಲಿದೆ, ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ನೀವು ಇಷ್ಟು ದಿನ ಕಾಯುತ್ತಿದ್ದೀರಿ, ಇನ್ನೂ 24 ಗಂಟೆಗಳ ಕಾಲ ಕಾಯಿರಿ. ನಾನು ದೃಢೀಕರಿಸಲು ಅಥವಾ ನಿರಾಕರಿಸಲು ಸಾಧ್ಯವಿಲ್ಲ. ನನಗೆ ಈ ಬಗ್ಗೆ ತಿಳಿದಿಲ್ಲ’ ಎಂದು ಸಿಟಿ ರವಿ ಹೇಳಿದ್ದರು. ಅಂದಹಾಗೆ ಸುಮಲತಾ ಸಮ್ಮಿಶ್ರ ಸರ್ಕಾರದ ನಿರ್ಧಾರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸುಮಲತಾ ಸ್ಪರ್ಧಿಸಿದ್ದರು. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ 2019ರಲ್ಲಿ 1,25,876 ಮತಗಳ ಅಂತರದಿಂದ ಗೆದ್ದಿದ್ದರು. ಅಂದಿನ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪುತ್ರ ಜೆಡಿಎಸ್‌ನ ನಿಖಿಲ್ ಕುಮಾರಸ್ವಾಮಿಯವರನ್ನು ಸೋಲಿಸಿದ್ದರು.