Wednesday, May 31, 2023
spot_img
- Advertisement -spot_img

ವರಿಷ್ಠರು ಸೂಚಿಸಿದರೆ ಮಂಡ್ಯದಲ್ಲಿ ಸ್ಪರ್ಧಿಸುವೆ : ಸುಮಲತಾ ಅಂಬರೀಶ್

ಮಂಡ್ಯ: ವರಿಷ್ಠರು ಸೂಚಿಸಿದರೆ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿ, ಮಂಡ್ಯ ಕ್ಷೇತ್ರದಲ್ಲಿ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ವದಂತಿ ಇದೆ. ಪಕ್ಷ ಸೂಚನೆ ನೀಡಿದರೆ ನನ್ನ ಸ್ಪರ್ಧೆ ಇರಲಿದೆ. ಈವರೆಗೆ ಪಕ್ಷ ನನಗೆ ಯಾವುದೇ ಸೂಚನೆ ನೀಡಿಲ್ಲ. ಮಂಡ್ಯ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಮರ್ಥರಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಮದ್ದೂರಿನಲ್ಲಿ ದಿ. ಅಂಬರೀಶ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಬಿಜೆಪಿಗೆ ಪ್ಲಸ್​ ಆಗುತ್ತೆ ಎಂದರು.ಮಂಡ್ಯ ಜಿಲ್ಲೆಯ ಜನರು ಬದಲಾವಣೆ ಬಯಸುತ್ತಿದ್ದಾರೆ. ಹೀಗಾಗಿ ಮಂಡ್ಯ ಜಿಲ್ಲೆಯಲ್ಲಿ ಈ ಬಾರಿ ಅಚ್ಚರಿ ಫಲಿತಾಂಶ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಂಡ್ಯ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ವದಂತಿ ಇದ್ದು, ಪಕ್ಷ ಸೂಚನೆ ನೀಡಿದರೆ ನನ್ನ ಸ್ಪರ್ಧೆ ಇರಲಿದೆ ಎಂದು ಹೇಳಿದ್ದಾರೆ.

Related Articles

- Advertisement -

Latest Articles