ಬೆಂಗಳೂರು : ಬಿಜೆಪಿ ಜೆಡಿಎಸ್ ಭದ್ರಕೋಟೆ ಎಂದು ಪರಿಗಣಿಸಲಾದ ಮಂಡ್ಯ ಜಿಲ್ಲೆ ವಶಪಡಿಸಿಕೊಳ್ಳಲು ಪ್ಲಾನ್ ಮಾಡ್ತಿದ್ದು, ಸಂಸದೆ ಸುಮಲತಾರನ್ನು ರಾಜ್ಯ ರಾಜಕೀಯಕ್ಕೆ ಕರೆತರಲು ಚಿಂತನೆ ನಡೆಸಿದೆ ಎಂದು ಹೇಳಲಾಗ್ತಿದೆ.
ಮೇ 10ರಂದು ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸೋದ್ರ ಜೊತೆಗೆ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಟಾರ್ ಪ್ರಚಾರಕಿಯಾಗಿಯೂ ಕೆಲಸ ಮಾಡಲಿದ್ದಾರೆ. ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಬಿಜೆಪಿ ತಲಾ ಒಂದು ಸ್ಥಾನ ಗೆದ್ದುಕೊಂಡಿದೆ. ಹೀಗಾಗಿ ಬಿಜೆಪಿ ಗೆಲ್ಲಿಸುವ ತಂತ್ರದ ಮೇಲೆ ಸುಮಲತಾರನ್ನು ನಿಲ್ಲಿಸಲು ಯೋಚನೆ ಮಾಡಲಾಗ್ತಿದೆ. ಈ ಹಿಂದೆ ನಿಖಿಲ್ ವಿರುದ್ಧ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
57 ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ದಕ್ಷಿಣ ಕರ್ನಾಟಕ ಪ್ರದೇಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಬೇಕೆಂಬುದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಯತ್ನವಾಗಿದೆ. ಇಲ್ಲಿಂದ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಭರವಸೆಯನ್ನು ಬಿಜೆಪಿ ಹೊಂದಿದೆ.
ಅಂದಹಾಗೆ ಕೆಲ ದಿನಗಳ ಹಿಂದೆ ಸುದ್ದಿಗೋಷ್ಟಿ ನಡೆಸಿ ಸುಮಲತಾ ನಾನು ಸಂಪೂರ್ಣವಾಗಿ ಬಿಜೆಪಿಯನ್ನು ಬೆಂಬಲಿಸುತ್ತೇನೆ ಎಂದು ರಾಜಕೀಯ ನಡೆ ಬಗ್ಗೆ ಸುಮಲತಾ ತಿಳಿಸಿದ್ದರು. ಸುಮಲತಾ ಇತ್ತೀಚೆಗೆ ಬಿಜೆಪಿ ಸೇರಿದ್ದಾರೆ. ಇವರು 2019 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದಿದ್ದರು.