Wednesday, March 22, 2023
spot_img
- Advertisement -spot_img

ಉಚಿತ ವಿದ್ಯುತ್ ನೀಡೋದಾಗಿ ಸಿದ್ದರಾಮಯ್ಯ ಸುಳ್ಳು ಭರವಸೆ ನೀಡ್ತಿದ್ದಾರೆ : ಸಚಿವ ಸುನೀಲ್ ಕುಮಾರ್

ಉಡುಪಿ: ಎಸ್ಕಾಂ ದಿವಾಳಿ ಮಾಡಿದ ಸಿದ್ದರಾಮಯ್ಯ ಸುಳ್ಳು ಭರವಸೆ ನೀಡ್ತಿದ್ದಾರೆ. ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್​ ನೀಡುವುದಾಗಿ ಹೇಳುತ್ತಿದ್ದಾರೆ. ಇದರಲ್ಲಿ ಇಂಧನ ಇಲಾಖೆಯನ್ನು ಖಾಸಗೀಕರಣ ಮಾಡುವ ಹುನ್ನಾರ ಅಡಗಿದೆ ಎಂದು ಇಂಧನ ಇಲಾಖೆ ಸಚಿವ ಸುನೀಲ್ ಕುಮಾರ್ ಟಾಂಗ್ ನೀಡಿದ್ದಾರೆ.


ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್​ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿತ್ತು. ಈ ವಿಚಾರವಾಗಿ ಸುನೀಲ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಎಲ್ಲಾ ಎಸ್ಕಾಂಗಳು ದಿವಾಳಿಯಾಗಿದ್ದವು. ಬೊಮ್ಮಾಯಿ ಸಿಎಂ ಆದ ನಂತರ 9 ಸಾವಿರ ಕೋಟಿ ರೂ. ನೀಡಿದ್ದೇವೆ. ಈಗಾಗಲೇ ಸಬ್ಸಿಡಿ ರೂಪದಲ್ಲಿ ಸರ್ಕಾರ 16,000 ಕೋಟಿ ರೂ. ನೀಡ್ತಿದೆ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರ ಈ ಆರ್ಥಿಕ ನಷ್ಟವನ್ನು ಸರಿದೂಗಿಸುವ ಕೆಲಸ ಮಾಡಿದೆ ಎಂದು ಹೇಳಿದರು.ತಾವು ಮುಖ್ಯಮಂತ್ರಿಯಾಗಿದ್ದಾಗ ಕತ್ತಲೆಯಲ್ಲಿ ಬಜೆಟ್ ಓದಿದ್ದನ್ನು ಸಿದ್ದರಾಮಯ್ಯ ಮರೆತಿರಬೇಕು. ನಿಮ್ಮ ಕಾಲದಲ್ಲಿ‌ ಇಂಧನ ಇಲಾಖೆ ಹೇಗೆ ಕಾರ್ಯ ನಡೆಸಿತ್ತು ಎಂಬುದಕ್ಕೆ ಈ ಚಿತ್ರವೇ ಸಾಕ್ಷಿ. ನೀವು ಎಸ್ಕಾಂಗಳನ್ನು ನಷ್ಟಕ್ಕೆ ದೂಡಿದ್ದಿರಿ ಎಂದು ಕಿಡಿಕಾರಿದರು.

Related Articles

- Advertisement -

Latest Articles