Tuesday, March 28, 2023
spot_img
- Advertisement -spot_img

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಬಿಡುಗಡೆ ಮಾಡಿ : ಸುಪ್ರೀಂ ಆದೇಶ

ದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಬಿಡುಗಡೆ ಮಾಡಿ ಆದೇಶವನ್ನು ಸುಪ್ರೀಂ ಕೋರ್ಟ್ ಹೊರಡಿಸಿದೆ.

1991ರ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ನಳಿನಿ ಅವರಲ್ಲದೆ, ಶ್ರೀಹರನ್, ಸಂತನ್, ಮುರುಗನ್, ರಾಬರ್ಟ್ ಪಾಯಸ್ ಮತ್ತು ರವಿಚಂದ್ರನ್ ಅವರು ಜೈಲು ಪಾಲಾಗಿದ್ದರು. ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಾದ ನಳಿನಿ ಶ್ರೀಹರನ್ ಮತ್ತು ಇತರ ಐವರನ್ನು ಬಿಡುಗಡೆ ಮಾಡಲು ಸುಪ್ರೀಂ ಆದೇಶ ನೀಡಿದೆ.

1991ರ ಮೇ 21ರ ರಾತ್ರಿ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ರ್ಯಾಲಿಯಲ್ಲಿ ಧನು ಎಂಬ ಮಹಿಳಾ ಆತ್ಮಾಹುತಿ ಬಾಂಬರ್‌ ಮಾಜಿ ಪ್ರಧಾನಿ ರಾಜೀವ್ ಗಾಂಧಿಯನ್ನು ಹತ್ಯೆ ಮಾಡಿದ್ದರು. ಇದೀಗ ಮಾಜಿ ಪ್ರಧಾನಿಯನ್ನು ಹತ್ಯೆ ಮಾಡಿದ ಅಪರಾಧಿಗಳನ್ನು ಇಂದು ಬಿಡುಗಡೆಗೊಳಿಸುವಂತೆ ಆದೇಶವನ್ನು ಸುಪ್ರೀಂ ಆದೇಶವನ್ನು ನೀಡಿದೆ. ನಾವು ಈಗಾಗಲೇ 30 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿದ್ದೇವೆ.

ರಾಜೀವ್ ಗಾಂಧಿಯ ಕೊಲೆಯ 7 ಅಪರಾಧಿಗಳ ಶಿಕ್ಷೆಯ ಅವಧಿಯನ್ನು ಕಡಿಮೆ ಮಾಡಲು ತಮಿಳುನಾಡು ಸರ್ಕಾರ 4 ವರ್ಷಗಳ ಹಿಂದೆಯೇ ಒಪ್ಪಿಕೊಂಡಿತ್ತು ಎಂದು ಅಪರಾಧಿಗಳಾದ ಎಸ್​ ನಳಿನಿ ಮತ್ತು ಆರ್​ಪಿ ರವಿಚಂದ್ರನ್ ತಮ್ಮ ಅರ್ಜಿಯಲ್ಲಿ ತಿಳಿಸಿದ್ದರು.

ಆದರೆ ಈ ವರ್ಷ ಮೇ ತಿಂಗಳಲ್ಲಿ ಸುಪ್ರಿಂ ಕೋರ್ಟ್‌ ಪೆರಾರಿವಾಲನ್‌ನ್ನು ಜೈಲಿನಿಂದ ಬಿಡುಗಡೆ ಮಾಡಲು ಸಂವಿಧಾನದ 142ನೇ ವಿಧಿಯ ಅಡಿಯಲ್ಲಿ ತನ್ನ ವಿಶೇಷ ಅಧಿಕಾರವನ್ನು ಬಳಸಿ ಬಿಡುಗಡೆಗೊಳಿಸಿತು. ಆದರೆ ಉಳಿದ ಆರು ಅಪರಾಧಿಗಳು ತಮಿಳುನಾಡಿನ ಜೈಲುಗಳಲ್ಲಿ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದರು.

Related Articles

- Advertisement -

Latest Articles