ಮಧ್ಯಪ್ರದೇಶ/ಗ್ವಾಲಿಯರ್: ಕಾಂಗ್ರೆಸ್ ಶಾಸಕರದ್ದು ಎನ್ನಲಾದ ಅಶ್ಲೀಲ ವಿಡಿಯೋವೊಂದು ವೈರಲ್ ಆಗಿದೆ. ಮಧ್ಯಪ್ರದೇಶದ ಗ್ವಾಲಿಯರ್‌ನ ದಾಬ್ರಾ ಕ್ಷೇತ್ರದ ಶಾಸಕ ಸುರೇಶ್ ರಾಜೇ ಅವರದ್ದು ಎನ್ನಲಾಗುತ್ತಿರುವ ವಿಡಿಯೋ ಭಾರೀ ಸಂಚಲನ ಸೃಷ್ಟಿಸಿದೆ.
ಹೋಟೆಲ್‌ವೊಂದರ ಕೋಣೆಯಲ್ಲಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಆಕ್ಷೇಪಾರ್ಹ ರೀತಿಯಲ್ಲಿ ಸೆರೆಯಾಗಿದ್ದಾರೆ. ಆತ ವಿಡಿಯೋ ಚಿತ್ರೀಕರಿಸುತ್ತಿರುವುದು ತಿಳಿದಿದ್ದರೂ ಶಾಸಕ ಪ್ರತಿರೋಧ ತೋರದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ: ಸಮೀಕ್ಷೆಯಲ್ಲಿ ‘ಕಮಲ’ ಕಮಾಲ್; ಈಗ ಚುನಾವಣೆ ನಡೆದ್ರೆ ಮೋದಿ ಮತ್ತೆ ಅಧಿಕಾರಕ್ಕೆ!
ಸುಮಾರು 2 ನಿಮಿಷಕ್ಕೂ ಹೆಚ್ಚು ಅವಧಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೋ ಸಂಬಂಧ ಬಿಜೆಪಿ ಕಿಡಿಕಾರಿದ್ದು, ಇದು ಕಾಂಗ್ರೆಸ್ ಸಂಸ್ಕೃತಿಯ ಭಾಗವಾಗಿದೆ ಎಂದು ಆಕ್ರೋಶ ಹೊರಹಾಕಿದೆ. ವಿಡಿಯೋದಲ್ಲಿರುವ ಶಾಸಕ ಸುರೇಶ್ ರಾಜೇ ಈ ಮೊದಲು ಬಿಜೆಪಿಯಿಂದ ಸ್ಪರ್ಧಿಸಿ ಸೋಲು ಕಂಡಿದ್ದರು, ಬಳಿಕ ಕಾಂಗ್ರೆಸ್ ಸೇರಿ ಕಳೆದ ಚುನಾವಣೆಯಲ್ಲಿ ಗೆಲುವು ದಾಖಲಿಸಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.