ಬೆಂಗಳೂರು: ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬ ನಿರ್ಧಾರವನ್ನು ಪಕ್ಷದ ನಾಯಕರು ಕೈಗೊಳ್ಳುತ್ತಾರೆ ಎಂದು ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ,ಶೀಘ್ರದಲ್ಲೇ ಕರ್ನಾಟಕದ ನೂತನ ಮುಖ್ಯಮಂತ್ರಿಯ ಹೆಸರು ಪ್ರಕಟಿಸಲಿದ್ದಾರೆ ,ತಡಮಾಡಲ್ಲ, ಮಲ್ಲಿಕಾರ್ಜುನ ಖರ್ಗೆ ಅವರ ತೀರ್ಪನ್ನು ನನ್ನ ತೀರ್ಪು ಆಗಿ ಮಾಡಲು ಸಾಧ್ಯವಿಲ್ಲ. ಅವರು ಈ ಮಣ್ಣಿನ ಮಗ. ನಮ್ಮ ಹಿರಿಯ ನಾಯಕರು. ಈ ವಿಚಾರದಲ್ಲಿ ಅವರು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂಬ ಭರವಸೆ ನನಗಿದೆ, ಇದೇ ವೇಳೆ, “ಮೊದಲ ಸಚಿವ ಸಂಪುಟ ಸಭೆಯಲ್ಲೇ ನಮ್ಮ ಐದು ಗ್ಯಾರೆಂಟಿಗಳನ್ನು ಜಾರಿ ಮಾಡಲಿದ್ದೇವೆ” ಎಂದು ತಿಳಿಸಿದರು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಡಿ.ಕೆ.ಶಿವಕುಮಾರ್ ನಿವಾಸದ ಬಳಿಗೆ ಬಂದಿದ್ದ ಅಪಾರ ಸಂಖ್ಯೆಯ ಅಭಿಮಾನಿಗಳು, “ನಮಗೆ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು” ಎಂದು ಘೋಷಣೆಗಳನ್ನು ಕೂಗಿದರು. ಮತ್ತೊಂದೆಡೆ, ಸಿದ್ದರಾಮಯ್ಯ ಅವರನ್ನ ಮುಖ್ಯಮಂತ್ರಿ ಮಾಡಬೇಕೆಂದು ಅಭಿಮಾನಿಗಳು ಆಗ್ರಹಿಸಿದ್ದಾರೆ.