ನವದೆಹಲಿ: ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಲು ಸಾಧ್ಯವಾಗದೇ ಹೋದರೆ ಜೋಡೋ ಯಾತ್ರೆಯನ್ನು ಮುಂದೂಡಲು ಮಾಂಡವಿಯಾ ಕಾಂಗ್ರೆಸ್ ನಾಯಕರಿಗೆ ಹೇಳಿದ್ದಾರೆ. ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಲು ಕೇಂದ್ರ ಕೇಳಿಕೊಂಡಿದೆ. ಇಲ್ಲವೆಂದರೆ ಜೋಡೋ ಯಾತ್ರೆಯನ್ನು ಸ್ಥಗಿತಗೊಳಿಸಲು ತಿಳಿಸಿದೆ.
ಸಚಿವರು ಬರೆದಿರುವ ಪತ್ರದಲ್ಲಿ, ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮತ್ತು ಮಾಸ್ಕ್ ಹಾಗೂ ಸ್ಯಾನಿಟೈಸರ್‌ಗಳ ಬಳಕೆ ಮಾಡಲು ಕರೆ ನೀಡಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ ಸಂಸದ ಅಧೀರ್ ರಂಜನ್ ಚೌಧರಿ, ನಾನು ಬಿಜೆಪಿಯನ್ನು ಕೇಳಲು ಬಯಸುತ್ತೇನೆ. ಮನ್ಸುಖ್ ಮಾಂಡವಿಯಾ ಅವರು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯನ್ನು ಇಷ್ಟಪಡುತ್ತಿಲ್ಲ ಎಂದು ನಾನು ಭಾವಿಸುತ್ತೇನೆ. ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು ಮಾಂಡವಿಯಾ ಈ ಯೋಜನೆ ಮಾಡಿದ್ದಾರೆ ಎಂದಿದ್ದಾರೆ.