ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನ ಸೋಲಿಸಲು ಪ್ಲಾನ್ ಮಾಡ್ತಾ ಇದ್ದಾರೆ ಅನ್ನೋದು ಗೊತ್ತಿದೆ. ಇದೇ ವಿಚಾರಕ್ಕೆ ಸಂಬಂಧಿಸಿನಾಗೇಶ್ ಮನ್ನೋಳಕರ್ ಅವರನ್ನ ರಮೇಶ್ ಜಾರಕಿಹೊಳಿ ಬಿಜೆಪಿ ನಾಯಕರಿಗೆ ಭೇಟಿ ಮಾಡಿಸುತ್ತಿದ್ದಾರೆ ಅನ್ನೋ ಮಾಹಿತಿ ಹೊರ ಬಿದ್ದಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನ ಸೋಲಿಸಲು ರಮೇಶ್ ಜಾರಕಿಹೊಳಿ ಮರಾಠಾ ಸಮುದಾಯದ ಶಿಷ್ಯನ ಜೊತೆ ಬಿಜೆಪಿ ಹಿರಿಯ ನಾಯಕರನ್ನ ಭೇಟಿಯಾಗ್ತಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿನಿಧಿಸುವ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಮರಾಠ ಸಮುದಾಯದ ಮತಗಳೇ ನಿರ್ಣಾಯಕವಾಗಿವೆ. ಹೀಗಾಗಿ ಮರಾಠ ಸಮಾಜದ ಆಪ್ತ ನಾಗೇಶ್ ಮನ್ನೋಳಕರ್‌ಗೆ ಟಿಕೆಟ್ ಕೊಡಿಸಲು ರಮೇಶ್ ಜಾರಕಿಹೊಳಿ ಯತ್ನಿಸುತ್ತಿದ್ದಾರೆ. ಹಿಂಡಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿರುವ ಶಿಷ್ಯ ನಾಗೇಶ್ ಮನ್ನೋಳಕರ್ ಜೊತೆ ಬೆಂಗಳೂರು, ದೆಹಲಿ, ನಾಗ್ಪುರಗೆ ರಮೇಶ್ ಜಾರಕಿಹೊಳಿ ಟೂರ್ ನಡೆಸಿದ್ದು ರಮೇಶ್ ಜಾರಕಿಹೊಳಿ ನಡೆಗೆ ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿ ಚರ್ಚೆಗಳು ಪ್ರಾರಂಭವಾಗುತ್ತಿದೆ.
ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿ ಯಾರು ಅನ್ನೋದೇ ಇನ್ನೂ ಸಸ್ಪೆನ್ಸ್ ಆಗಿ ಉಳಿದುಕೊಂಡಿದ್ದು, ಸೋತ ಕ್ಷೇತ್ರದಲ್ಲೇ ಮತ್ತೆ ಗೆಲುವು ಸಾಧಿಸಲು ಮಾಜಿ ಶಾಸಕ ಸಂಜಯ್ ಪಾಟೀಲ್ ಕೂಡಾ ಗೆಲ್ಲಬೇಕೆಂಬ ಪಣ ತೊಟ್ಟಿದ್ದು, ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಲ ಅಧ್ಯಕ್ಷ ಧನಂಜಯ ಜಾಧವ್ ಸಹ ಟಿಕೆಟ್ ರೇಸ್‌ನಲ್ಲಿದ್ದಾರೆ.