Wednesday, November 29, 2023
spot_img
- Advertisement -spot_img

ಸ್ಟಾಲಿನ್, ಡಿಎಂಕೆ ಸಚಿವರ ಕುರಿತು ಅವಹೇಳನಕಾರಿ ಪೋಸ್ಟ್: ಬಿಜೆಪಿ ನಾಯಕನ ಬಂಧನ

ತಮಿಳುನಾಡು: ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮತ್ತು ಡಿಎಂಕೆಯ ಇತರ ನಾಯಕರ ಕುರಿತು ಅವಹೇಳನಕಾರಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಿಜೆಪಿ ನಾಯಕನ ಬಂಧಿಸಲಾಗಿದೆ.

ಮೂಲಗಳ ಪ್ರಕಾರ, ಬಿಜೆಪಿ ಪದಾಧಿಕಾರಿಯನ್ನು ವಡುಗಪಾಳ್ಯಂ ನಿವಾಸಿ ಸುರೇಶ್ ಎಂದು ಬಂಧಿತನನ್ನು ಗುರುತಿಸಲಾಗಿದೆ. ಸಚಿವ ಉದಯನಿಧಿ ಸ್ಟಾಲಿನ್, ಸೆಂಥಿಲ್ ಬಾಲಾಜಿ, ಮನೋ ತಂಗರಾಜ್, ಪಿಟಿಆರ್ ತ್ಯಾಗರಾಜನ್, ಮುಖ್ಯಮಂತ್ರಿ ಅಳಿಯ ಶಬರೇಶನ್, ಡಿಎಂಕೆ ಸಂಸದ ಟಿಆರ್ ಬಾಲು ಮತ್ತು ವಿಸಿಕೆ ಸಂಸದ ತಿರುಮಾವಲವನ್ ಅವರ ಅವಹೇಳನಕಾರಿ ಚಿತ್ರಗಳನ್ನು ಪೋಸ್ಟ್ ಮಾಡಿದ ಆರೋಪ ಬಂಧಿತನ ಮೇಲಿದೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಪೊಲೀಸರು, ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

ಹಿಂದೂ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಉದಯನಿಧಿ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆಗಳಿಗೆ ಹೋಲಿಸಿದ ನಂತರ ರಾಜಕೀಯ ವಲಯದಲ್ಲಿ ವಾಗ್ವಾದಗಳು ನಡೆದಿವೆ. ಚೆನ್ನೈನಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಉದಯನಿಧಿ, ಇಂತಹ ವಿಷಯಗಳನ್ನು ವಿರೋಧಿಸಬಾರದು. ಅವುಗಳನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿ ವಿವಾದ ಸೃಷ್ಟಿಸಿದ್ದರು.

ಚೆನೈನಲ್ಲಿ ಆಯೋಜಿಸಿದ್ದ ಪ್ರಗತಿಪರ ಲೇಖಕರು ಮತ್ತು ಕಲಾವಿದರ ಸಂಘದ ಸಭೆಯಲ್ಲಿ ಸಚಿವ ಸ್ಟಾಲಿನ್ ನೀಡಿರುವ ವಿಷಕಾರಿ ಹೇಳಿಕೆಯಲ್ಲಿ ಸನಾತನ ಧರ್ಮವನ್ನು ಡೆಂಘೆ, ಮಲೇರಿಯಾ, ಕೊರೊನಾ ಸೋಂಕಿಗೆ ಹೋಲಿಕೆ ಮಾಡಿ ಭಾರೀ ವಿವಾದವನ್ನು ಸೃಷ್ಟಿಸಿದ್ದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles