ಆನೇಕಲ್ : ಕನ್ನಡ ಒಕ್ಕೂಟದಿಂದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಾಳೆ ಪ್ರತಿಭಟನೆ ನಡೆಯಲಿದ್ದು, ಅತ್ತಿಬೆಲೆಯಲ್ಲಿ ತಮಿಳುನಾಡು ಗಡಿ ಮುತ್ತಿಗೆಗೆ ನಿರ್ಧರಿಸಲಾಗಿದೆ.
ಮೇಕೆದಾಟು ಯೋಜನೆ ಬಗ್ಗೆ ತಮಿಳುನಾಡು ಸರ್ಕಾರ ಕ್ಯಾತೆ ತೆಗೆಯುತ್ತಿದೆ, ರಾಜ್ಯದಲ್ಲಿ ಮೇಕೆದಾಟು ಯೋಜನೆ ಅನುಷ್ಟಾನ ಮಾಡಬೇಕು. ಕಾವೇರಿ ವಿಚಾರದಲ್ಲೂ ತಮಿಳುನಾಡು ಸರ್ಕಾರದ ಧೋರಣೆ ವಿರುದ್ದ ಆಕ್ರೋಶ ವ್ಯಕ್ತವಾಗಿದ್ದು, ಹೀಗಾಗಿ ತಮಿಳುನಾಡು ಸರ್ಕಾರದ ವಿರುದ್ದ ಗಡಿ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ.
ಇದನ್ನೂ ಓದಿ : ತಮಿಳುನಾಡಿಗೆ ʼಕಾವೇರಿʼ ನೀರು ಬಿಡಬಾರದು: ಕಟೀಲ್
ನಮ್ಮ ಬಳಿ ಕೇವಲ ಕುಡಿಯಲು ಮತ್ತು ನಮ್ಮ ರೈತರ ಬೆಳೆಗಳಿಗೆ ಸಾಕಾಗುವಷ್ಟು ಮಾತ್ರ ನೀರಿದೆ. ಕಾವೇರಿ ಅಚ್ಚುಕಟ್ಟು ಪ್ರದೇಶದ ಅಣೆಕಟ್ಟುಗಳಲ್ಲಿ ನೀರಿಲ್ಲ ಎಂದು ಸ್ಪಷ್ಟವಾಗಿ ಕಾವೇರಿ ಪ್ರಾಧಿಕಾರಕ್ಕೆ ಮಾಹಿತಿ ನೀಡಿದ್ದೇವೆ ಎಂದು ಹೇಳಿದರು.
ಕಾವೇರಿ ನೀರಿನ ವಿಚಾರವಾಗಿ ಪ್ರಧಾನಮಂತ್ರಿಗಳ ಕಚೇರಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ಪತ್ರ ಬರೆಯುತ್ತಲೇ ಇದ್ದೇವೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುಂದಿನ ವಾರ ಅವಕಾಶ ಸಿಗಬಹುದೆಂದು ನಂಬಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.