ಬೆಂಗಳೂರು: ಮಿನಿ ಟೆಕ್ಸ್ಟೈಲ್ ಪಾರ್ಕ್ ಸ್ಥಾಪಿಸುವ ಮೂಲಕ ನೇಕಾರರಿಗೆ ಅನುಕೂಲ ಮಾಡಿಕೊಡಿ ಎಂದು ಸಿಎಂ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು.
ವಿದ್ಯುತ್ ಮಗ್ಗ ನೇಕಾರರು ಮತ್ತು ಕಾರ್ಮಿಕರಿಗೆ ಡಿಬಿಟಿ ಮೂಲಕ ನೇಕಾರ್ ಸಮ್ಮಾನ್ ಯೋಜನೆಯ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿ ಮಾತನಾಡಿದರು.
ಮುಂದಿನ ದಿನಗಳಲ್ಲಿ ನೇಕಾರರು ಹೆಚ್ಚಿನ ಸಂಖ್ಯೆಯಲ್ಲಿರುವ 25 ತಾಲೂಕುಗಳಲ್ಲಿ ಮಿನಿ ಟೆಕ್ಸ್ಟೈಲ್ ಪಾರ್ಕ್ ಸ್ಥಾಪಿಸಿ ನೆರವಾಗಿ ಎಂದರು. ನೇಕಾರರೊಂದಿಗೆ ವೈಯಕ್ತಿಕವಾಗಿ ಹೆಚ್ಚಿನ ಒಡನಾಟವನ್ನು ತಾವು ಹೊಂದಿದ್ದು, ಅವರ ಸಂಕಷ್ಟಗಳನ್ನು ಸಹ ಹತ್ತಿರದಿಂದ ನಾನು ನೋಡಿದ್ದೇನೆ ಎಂದು ಹೇಳಿದರು.
ನೇಕಾರರು ತಮ್ಮ ಉತ್ಪನ್ನಗಳ ಗುಣಮಟ್ಟ ವೃದ್ಧಿಸುವ ಮೂಲಕ ರಫ್ತು ಮಾಡಲು ಸಹ ಮುಂದಾಗಬೇಕು. ಡಿಜಿಟಲ್ ವೇದಿಕೆಯ ಮೂಲಕ ಮಾರುಕಟ್ಟೆ ವಿಸ್ತರಿಸಬೇಕು. ಇದಕ್ಕೆ ಕೈಮಗ್ಗ ಮತ್ತು ಜವಳಿ ಇಲಾಖೆ ಸಹಕಾರ ನೀಡಲಿದ್ದು, ಅಮೇಜಾನ್, ಫ್ಲಿಪ್ ಕಾರ್ಟ್ ಮತ್ತಿತರ ಆನ್ಲೈನ್ ವ್ಯಾಪಾರಿ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲು ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.
ನೇಕಾರರ ಸಂಕಷ್ಟಗಳಿಗೆ ಸರ್ಕಾರ ಸದಾ ಸ್ಪಂದಿಸಿದ್ನೇದು, ಕಾರರಿಗೆ 2 ಲಕ್ಷ ರೂ.ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಒದಗಿಸಲಾಗುವುದು ಎಂದು ಇದೇ ವೇಳೆ ಭರವಸೆ ಕೊಟ್ಟರು.