Wednesday, November 29, 2023
spot_img
- Advertisement -spot_img

ಜ್ಞಾನ, ಅರ್ಹತೆಯೇ ಇಲ್ಲದ ನಕಲಿ ಸಾಮ್ರಾಟನಿಗೆ ವಿಪಕ್ಷ ನಾಯಕ ಸ್ಥಾನ: ಕಾಂಗ್ರೆಸ್‌ ಲೇವಡಿ

ಬೆಂಗಳೂರು : ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆರ್.ಅಶೋಕ್ ಆಯ್ಕೆಯಾಗಿರುವ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ ಟ್ವೀಟ್‌ ಮೂಲಕ ಲೇವಡಿ ಮಾಡಿದೆ.

ರಾಜ್ಯಕ್ಕೆ ವಿರೋಧ ಪಕ್ಷದ ನಾಯಕನನ್ನು ಕೊಡಿ ಎಂದರೆ ವಿರೋಧ ಪಕ್ಷವನ್ನೇ ವಿರೋಧಿಸುವ ನಾಯಕರನ್ನು ಕೊಡುತ್ತಿದೆ ಎಂದು ವ್ಯಂಗ್ಯವಾಡಿದೆ.

ಯಾವುದೇ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆಗೂ ಕಿತ್ತಾಡದಷ್ಟು ಬಿಜೆಪಿಯ ಕಿತ್ತಾಟ ಜೋರಾಗಿದೆ. ಬಿಜೆಪಿ ನಾಯಕರು ಸೇರುವ ಜಾಗದಲ್ಲಿ ಕೋಲು, ದೊಣ್ಣೆ ಹಾಗೂ ಇತರೆ ಯಾವುದೇ ಆಯುಧವಾಗಿ ಬಳಸಬಹುದಾದ ವಸ್ತುಗಳನ್ನು ದೊರಕದಂತೆ ನೋಡಿಕೊಳ್ಳಬೇಕು. ಅಕಸ್ಮಾತ್ ಹೊಡೆದಾಡಿಕೊಂಡರೆ ಆಸ್ಪತ್ರೆಗಳಲ್ಲಿ ನೂಕುನುಗ್ಗಲಾಗುವ ಸಾಧ್ಯತೆ ಇರುತ್ತದೆ ಎಂದು ಕಾಲೆಳೆದಿದೆ.

ಕನಕಪುರದಲ್ಲಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿರುವ ಬಿಜೆಪಿ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕ! ವಿರೋಧ ಪಕ್ಷದ ನಾಯಕನಾಗಲು ಬೇಕಿರುವ ಜ್ಞಾನ, ಅರ್ಹತೆ ಯಾವುದೂ ಇಲ್ಲದ ನಕಲಿ ಸಾಮ್ರಾಟನೇ ಕೊನೆಯ ಆಯ್ಕೆಯಾಗಿದ್ದು ಬಿಜೆಪಿ ನಾಯಕರ ಬರಗಾಲ ಎದುರಿಸುತ್ತಿರುವುದಕ್ಕೆ ನಿದರ್ಶನ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಅವರಂತಹ ನಾಯಕರೆದುರು ತರಗೆಲೆಯಂತಹ ವ್ಯಕ್ತಿಯನ್ನು ತಂದು ಕೂರಿಸಿದೆ ಬಿಜೆಪಿ! ಎಂದು ಕುಟುಕಿದೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles