ಮಂಗಳೂರು: ಮುಂದಿನ ವರ್ಷದಲ್ಲಿ ದೇಶ ಯೂರಿಯಾ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲಿದೆ ಎಂದು ಕೇಂದ್ರ ರಾಸಾಯನಿಕ, ರಸ ಗೊಬ್ಬರ ಮತ್ತು ನವೀಕರಿಸಬಹುದಾದ ಇಂಧನ ಖಾತೆಯ ರಾಜ್ಯ ಸಚಿವ ಭಗವಂತ ಖೂಬಾ ತಿಳಿಸಿದರು.
ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.
ಇದನ್ನೂ ಓದಿ: ʼಕಾವೇರಿʼ ಸಮಸ್ಯೆಗೆ ʼಮೇಕೆದಾಟು ಯೋಜನೆʼಯೊಂದೇ ಪರಿಹಾರ: ಡಿಕೆಶಿ
ದೇಶದಲ್ಲಿ ಈಗಾಗಲೇ ಐದು ಯೂರಿಯಾ ಉತ್ಪಾದನಾ ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು, ಮುಂದಿನ ವರ್ಷ 6ನೇ ಘಟಕ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ ಪ್ರತಿ ವರ್ಷ 12.7 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆ ಮಾಡುವ ಮೂಲಕ ದೇಶದ ಅಗತ್ಯದ ಯೂರಿಯಾ ಉತ್ಪಾದನೆ ಯ ಗುರಿ ಸಾಧನೆಯೊಂದಿಗೆ ಸ್ವಾವಲಂಬನೆ ಸಾಧ್ಯ ವಾಗಲಿದೆ. ಮುಂದಿನ ವರ್ಷ ಬೇಡಿಕೆ ಇರುವ ನ್ಯಾನೋ ಯೂರಿಯಾ ಮತ್ತು ನ್ಯಾನೋ ಡಿಎಪಿ ರೈತರಿಗೆ ಒದಗಿಸಲಾಗುವುದು ಎಂದು ತಿಳಿಸಿದರು. ಈ ವೇಳೆ ನಳೀನ್ ಕುಮಾರ್ ಕಟೀಲ್ ಜೊತೆಗಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.