ಕೋಲ್ಕತ್ತಾ: ಜನರಿಗೆ ಫ್ಲ್ಯಾಟ್ ಕೊಡುತ್ತೇನೆ ಎಂದು ನಂಬಿಸಿ ವಂಚನೆ ನಡೆಸಿರುವ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಹಾಗೂ ನಟಿ ನುಸ್ರತ್ ಜಹಾನ್ ಅವರಿಗೆ ಜಾರಿ ನಿರ್ದೇಶನಾಲಯವು (ಇಡಿ) ಸಮನ್ಸ್ ನೀಡಿದೆ.
ಕೋಲ್ಕತ್ತಾದ ಪೂರ್ವಭಾಗದ ಉಪನಗರದಲ್ಲಿ ತಮಗೆ ಫ್ಲ್ಯಾಟ್ ನೀಡುವುದಾಗಿ ಭರವಸೆ ನೀಡಿ ವಂಚಿಸಲಾಗಿದೆ ಎಂದು ಆರೋಪಿಸಿ, ಹಿರಿಯ ನಾಗರಿಕರು ದೂರು ದಾಖಲಿಸಿದ್ದರು. ಈ ಸಂಬಂಧ ಇ.ಡಿ ತನಿಖೆ ಕೈಗೆತ್ತಿಕೊಂಡಿದೆ.
ಇನ್ನು ನುಸ್ರತ್ ಅವರನ್ನು ಸೆಪ್ಟೆಂಬರ್ 12ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದ್ದು, ಪ್ರಕರಣ ಸಂಬಂಧ ಹೇಳಿಕೆ ದಾಖಲಿಸಿಕೊಳ್ಳುವ ಸಾಧ್ಯತೆ ಇದೆ.
ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಅನರ್ಹ; ವಿಚಾರಣೆ ಮುಂದೂಡಿದ ಹೈಕೋರ್ಟ್
ಈ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದ ನುಸ್ರತ್, ವಂಚನೆಯ ಆರೋಪ ಕೇಳಿಬಂದಿರುವ ಕಂಪನಿಯ ನಿರ್ದೇಶಕಿ ಸ್ಥಾನಕ್ಕೆ ಮಾರ್ಚ್ 2017ರಲ್ಲೇ ರಾಜೀನಾಮೆ ನೀಡಿರುವುದಾಗಿ ಅವರು ಹೇಳಿದ್ದರು. ಆ ಕಂಪನಿಯಿಂದ ಸಾಲ ಪಡೆದಿದ್ದು ನಿಜ. ಆದರೆ, ಮೇ 2017ರಲ್ಲೇ ಅದನ್ನು ಮರುಪಾವತಿಸಿದ್ದೇನೆ. ನನ್ನ ಮೇಲಿನ ಆರೋಪಗಳೆಲ್ಲ ಸುಳ್ಳು ಎಂದಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.