Sunday, October 1, 2023
spot_img
- Advertisement -spot_img

ರಮೇಶ್‌ ಜಾರಕಿಹೊಳಿ-ಸಿಪಿವೈ ದಿಢೀರ್‌ ಭೇಟಿ

ಬೆಂಗಳೂರು: ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ ಹಾಗೂ ಸಿ.ಪಿ.ಯೋಗೇಶ್ವರ್‌ ಅವರು ಇಂದು ಪರಸ್ಪರ ಭೇಟಿಯಾಗಿದ್ದು, ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ರಮೇಶ್‌ ಜಾರಕಿಹೊಳಿ ಅವರನ್ನು ಸದಾಶಿವನಗರದ ನಿವಾಸದಲ್ಲಿ ಭೇಟಿಯಾಗಿರುವ ಸಿ.ಪಿ.ಯೋಗೇಶ್ವರ್‌, ಸುಮಾರು ಎರಡು ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ.

ಇತ್ತ ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಹಸ್ತದ ಮಾತು ಜೋರಾಗಿ ಕೇಳಿ ಬರುತ್ತಿರುವ ನಡುವೆ ಉಭಯ ನಾಯಕರ ಭೇಟಿಯು ಕುತೂಹಲ ಕೆರಳಿಸಿದೆ.

ಇದನ್ನೂ ಓದಿ: ‘ದಿನದಿಂದ ದಿನಕ್ಕೆ ಬಿಜೆಪಿ ಕುಗ್ಗುತ್ತಿದೆ, ನಾಯಕನಿಲ್ಲದೆ ಸೊರಗುತ್ತಿದೆ’

ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುವ ಸಲುವಾಗಿ ಕಾಂಗ್ರೆಸ್‌ ಶಾಸರಕನ್ನ ಬಿಜೆಪಿಗೆ ಕರೆತರುವಲ್ಲಿ ರಮೇಶ್ ಜಾರಕಿಹೊಳಿ ಹಾಗೂ ಸಿ.ಪಿ.ಯೋಗೇಶ್ವರ್ ಅವರು ಮುಖ್ಯ ಪಾತ್ರ ವಹಿಸಿದ್ದರು.

ರಾಜಕೀಯ ಬೆಳವಣಿಗೆಯ ನಡುವೆಯೇ ಇವರಿಬ್ಬರ ಭೇಟಿ ಸಂಚಲನ ಮೂಡಿಸಿದ್ದು, ಯಾರ ವಿರುದ್ಧ ರಾಜಕೀಯ ತಂತ್ರ ಹೆಣೆದಿದ್ದಾರೆ ಎಂಬುದು ಸದ್ಯದಲ್ಲೇ ಹೊರಬೀಳುವ ಸಾಧ್ಯತೆ ಇದೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles