Monday, December 4, 2023
spot_img
- Advertisement -spot_img

ಕುರಿ, ಮೇಕೆ ಮಾಂಸ ಮಾರಾಟ ಮಳಿಗೆ ತೆರೆಯಲು ಸರ್ಕಾರದಿಂದ ನಿರ್ಧಾರ

ಬೆಂಗಳೂರು: ಕರ್ನಾಟಕ ಸರ್ಕಾರ ನಂದಿನಿ ಹಾಲಿನ ಉತ್ಪನ್ನಗಳ ಮಳಿಗೆ(ಕೆಎಂಎಫ್) ಮಾದರಿಯಲ್ಲಿಯೇ ರಾಜ್ಯದಾದ್ಯಂತ ಕುರಿ ಮತ್ತು ಮೇಕೆ ಮಾಂಸವನ್ನು ಉತ್ತಮ ಗುಣಮಟ್ಟದಲ್ಲಿ ಒಳ್ಳೆಯ ಬೆಲೆಗೆ ಮಾರಾಟ ಮಾಡಲು ಯೋಜಿಸುತ್ತಿದೆ ಕಾಂಗ್ರೆಸ್ ಎಂಎಲ್‌ಸಿ ಟಿ.ಬಿ. ಜಯಚಂದ್ರ ಹೇಳಿದ್ದಾರೆ.

ಇಂದು ನಗರದ ಚೀಲನಹಳ್ಳಿ ವಧಾಗಾರ ನಿರ್ಮಾಣದ ಕಾಮಗಾರಿ ಪ್ರಗತಿಗೆ ಸಂಬಂಧಿಸಿದಂತೆ ಟಿ.ಬಿ ಜಯಚಂದ್ರ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ತುಮಕೂರು ಜಿಲ್ಲೆಯ ಶಿರಾದಲ್ಲಿ ಅತ್ಯಾಧುನಿಕ ಕುರಿ-ಮೇಕೆಗಳ ವಧಾಗಾರ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದ್ದು, ಮುಂದಿನ ವರ್ಷದ ಜನವರಿಯಲ್ಲಿ ಲೋಕಾರ್ಪಣೆ ಮಾಡಲಾಗುವುದು. ಶಿರಾ ತಾಲೂಕಿನ ಚೀಲನಹಳ್ಳಿಯಲ್ಲಿ ಅತ್ಯಾಧುನಿಕ ಕುರಿ ಮೇಕೆಗಳ ವಧಾಗಾರ ಕೇಂದ್ರವನ್ನು ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆ ಮಾಡಲಾಗಿದ್ದು, ಅತ್ಯಾಧುನಿಕ ಯಂತ್ರೋಪಕರಣಗಳನ್ನು ಅಳವಡಿಸುವ ಕಾರ್ಯ ಮುಗಿದಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಮ.ಪ್ರದೇಶ, ಛತ್ತೀಸ್‌ಗಢ ವಿಧಾನಸಭೆ ಚುನಾವಣೆ: ಇಂದು ಮತದಾನ..!

ಇನ್ನು ಮುಂದಿನ ವರ್ಷದ ಜನವರಿಯಲ್ಲಿ ರೈತರಿಂದ ಕುರಿ ಮೇಕೆಗಳನ್ನು ಖರೀದಿಸಿ, ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಮಾಂಸ ಸಂಸ್ಕರಣೆ ಮಾಡಿ ಗ್ರಾಹಕರಿಗೆ ಒದಗಿಸಲಾಗುವುದು. ರೈತರು ಬೆಳೆದಿರುವ ಕುರಿ ಹಾಗೂ ಮೇಕೆಗಳಿಗೆ ಸ್ಪರ್ಧಾತ್ಮಕ ಬೆಲೆ, ಹಾಗೂ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಶುದ್ಧ ಮಾಂಸ ಸರಬರಾಜು ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ವಿವರಿಸಿದರು.

ಕೆಎಂಎಫ್‌ನ ನಂದಿನಿಯಂತಹ ಮಾಂಸದ ಬ್ರಾಂಡ್ ರಚಿಸಲು ಇಲಾಖೆ ಶ್ರಮಿಸಲಿದ್ದು, ಕುರಿ ಮತ್ತು ಮೇಕೆ ಚರ್ಮದಿಂದ ಉತ್ಪನ್ನಗಳನ್ನು ತಯಾರಿಸುವ ಯೋಜನೆ ಸರ್ಕಾರ ಹೊಂದಿದೆ. ಅಲ್ಲಿ ಕುರಿ ಮತ್ತು ಮೇಕೆ ಚರ್ಮ ಬಳಸಿ ತಯಾರಿಸುವ ಉತ್ಪನ್ನಗಳ ಬಗ್ಗೆ ಅಧ್ಯಯನ ಮಾಡಲಾಗುತ್ತದೆ’ ಎಂದು ಹೇಳಿದರು.

ಕುರಿ ಮತ್ತು ಮೇಕೆ ಸಾಕುವ ರೈತರ ಆರ್ಥಿಕ ಸ್ಥಿತಿ ಬಲಪಡಿಸಲು ನಾವು ಬಯಸುತ್ತೇವೆ. ಈ ಸಂಪೂರ್ಣ ಕ್ರಮದಿಂದಾಗಿ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸಲಿದೆ’ ಎಂದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles