ಬೆಂಗಳೂರು: ಜೆಡಿಎಸ್‌ನ ಪ್ರಜ್ವಲ್ ರೇವಣ್ಣ ಅವರಿಗೆ ಹೈಕೋರ್ಟ್‌ನಲ್ಲಿ ಭಾರಿ ಹಿನ್ನಡೆಯಾಗಿದೆ. ಸಂಸದ ಸ್ಥಾನದಿಂದ ಅಸಿಂಧು ಪ್ರಕರಣಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ತಡೆ ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.
ನ್ಯಾ.ಕೆ.ನಟರಾಜನ್ ಅವರ ಪೀಠವು ಪ್ರಜ್ವಲ್ ಅವರ ಅರ್ಜಿ ವಜಾ ಮಾಡಿ ಆದೇಶಿಸಿದೆ. ಇನ್ನು ಎರಡು ಅಂಶಗಳ ಆಧಾರದ ಮೇಲೆ ಪ್ರಜ್ವಲ್ ರೇವಣ್ಣ ಅರ್ಜಿ ವಜಾ ಆಗಿದೆ.
ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಬಂದ ದಿನವೇ ಮೇಲ್ಮನವಿ ಸಲ್ಲಿಸಲು ತಡೆ ಕೋರಿ ಅರ್ಜಿ ಸಲ್ಲಿಸಬೇಕಿತ್ತು. ಈ ಹಿನ್ನೆಲೆ ತೀರ್ಪು ನೀಡಿರುವ ನ್ಯಾಯಪೀಠದಿಂದಲೇ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.
ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವವರೆಗೆ ಅನರ್ಹತೆ ಆದೇಶಕ್ಕೆ ತಡೆ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಏನಿದು ಪ್ರಕರಣ?: ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಚುನಾವಣಾ ಅಫಿಡವಿಟ್‌ನಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದು, ಅವರು ಹೊಂದಿರುವ ಆಸ್ತಿಗಳ ನೈಜ ಮೌಲ್ಯವನ್ನು ಮರೆಮಾಚಲಾಗಿದೆ ಎಂಬ ಆರೋಪವಿದೆ. ಚುನಾವಣಾ ಅಕ್ರಮದ ಆರೋಪದ ಮೇರೆಗೆ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ, ಸೆಪ್ಟೆಂಬರ್ 1ರಂದು ಹೈಕೋರ್ಟ್ ಆದೇಶಿಸಿತ್ತು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.