Friday, September 29, 2023
spot_img
- Advertisement -spot_img

ಪ್ರಜ್ವಲ್‌ ರೇವಣ್ಣ ಅನರ್ಹ; ವಿಚಾರಣೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಕೆಗೆ ಕಾಲಾವಕಾಶ ಕೋರಿಕೆ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ.

ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಕೆಗೆ ಕಾಲಾವಕಾಶ ಬೇಕಾಗಿದೆ. ಹಾಗಾಗಿ ಅಲ್ಲಿಯವರಿಗೆ ಅಸಿಂಧು ತೀರ್ಪು ತಡೆಹಿಡಿಯುವಂತೆ ಪ್ರಜ್ವಲ್ ರೇವಣ್ಣ ಪರ ಹಿರಿಯ ವಕೀಲ ಉದಯ್ ಹೊಳ್ಳ ಅವರು  ಹೈಕೋರ್ಟ್​ಗೆ ಮನವಿ ಮಾಡಿದ್ದರು.

ಇಂದು ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌, ಆಕ್ಷೇಪಣೆ ಸಲ್ಲಿಸಲು ಸೂಚಿಸಿದ್ದಲ್ಲದೆ, ವಿಚಾರಣೆಯನ್ನು ಸೆಪ್ಟೆಂಬರ್ 8ಕ್ಕೆ ಮುಂದೂಡಿತು. ಜೊತೆಗೆ ಅಸಿಂಧು ಆದೇಶಕ್ಕೆ ತಡೆ ಕೋರಿ ಸಲ್ಲಿಸಿರುವ ಪ್ರಜ್ವಲ್​ ರೇವಣ್ಣ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ದೇವರಾಜೇಗೌಡ ಪರ ವಕೀಲರಿಗೂ ಹೈಕೋರ್ಟ್ ಸೂಚನೆ ನೀಡಿದೆ.

ಆಯ್ಕೆ ಅಸಿಂಧು ಪ್ರಶ್ನಿಸಿ ಪ್ರಜ್ವಲ್​ ರೇವಣ್ಣ ಪರ ವಕೀಲರು ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಇದಕ್ಕೂ ಮುನ್ನವೇ ಆಯ್ಕೆ ಅಸಿಂಧು ಆದೇಶವನ್ನು ತಡೆಹಿಡಿಯುವಂತೆ ಪ್ರಜ್ವಲ್‌ ರೇವಣ್ಣ ಹೈಕೋರ್ಟ್​ಗೆ ಮನವಿ ಮಾಡಿದ್ದರು. ಆದ್ರೆ, ಹೈಕೋರ್ಟ್ ಇದರ ವಿಚಾರಣೆಯನ್ನು ಮುಂದೂಡಿದೆ.

ಏನಿದು ಪ್ರಕರಣ?: ಚುನಾವಣಾ ಪ್ರಮಾಣಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿರುವ ಆರೋಪದಡಿ ಜೆಡಿಎಸ್‌ನ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ, ಹೈಕೋರ್ಟ್‌ ಆದೇಶಿಸಿತ್ತು.

ವಕೀಲ ಹಾಗೂ ಕೆಡಿಪಿ ಮಾಜಿ ಸದಸ್ಯ ಜಿ.ದೇವರಾಜೇಗೌಡ ಹಾಗೂ ಎ.ಮಂಜು ಎಂಬುವರು ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಆಸ್ತಿ ವಿವರವನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣ ಪತ್ರವನ್ನು ಸಲ್ಲಿಸಿದ್ದಾರೆ ಎಂದು ಆರೋಪಿಸಿ ಏ.26, 2019ರಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.

ಇದನ್ನೂ ಓದಿ: Prajwal Revanna Disqualified: ಜೆಡಿಎಸ್‌ನ ಏಕೈಕ ಸಂಸದರಾಗಿದ್ದ ಪ್ರಜ್ವಲ್‌ ರೇವಣ್ಣ!

ಪ್ರಜ್ವಲ್‌ ರೇವಣ್ಣ ಪ್ರಮಾಣ ಪತ್ರದಲ್ಲಿ ಹಲವಾರು ಸುಳ್ಳು ಮಾಹಿತಿಗಳನ್ನು ನೀಡಿದ್ದು ಅವರ ನಾಮಪತ್ರ ರದ್ದುಗೊಳಿಸಿ ಕ್ರಮ ಕೈಗೊಳ್ಳಿ ಎಂದು ದೂರಿನಲ್ಲಿ ತಿಳಿಸಲಾಗಿತ್ತು. ಈ ಬಗ್ಗೆ ವಿವರವಾದ ವರದಿ ಸಲ್ಲಿಸುವಂತೆ ರಾಜ್ಯ ಚುನಾವಣಾ ಆಯೋಗವು ಹಾಸನ ಜಿಲ್ಲಾ ಚುನಾವಣಾಧಿಕಾರಿಗೆ ಸೂಚನೆ ನೀಡಿತ್ತು.

ಈ ವರದಿ ಆಧರಿಸಿ, ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠವು ಇತ್ತೀಚೆಗೆ ಪ್ರಜ್ವಲ್‌ ರೇವಣ್ಣ ಅವರ ಆಯ್ಕೆ ಅಸಿಂಧು ಎಂದು ಆದೇಶಿಸಿತ್ತು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles