ಬೆಂಗಳೂರು: ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ಆದೇಶಕ್ಕೆ ತಡೆ ಕೋರಿ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಂಡಿದ್ದು, ತೀರ್ಪನ್ನು ಕಾಯ್ದಿರಿಸಿದೆ.
ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರು ತೀರ್ಪನ್ನು ಕಾಯ್ದಿರಿಸಿದ್ದಲ್ಲದೆ, ಸೆಪ್ಟೆಂಬರ್ 11 ಅಥವಾ 12ರಂದು ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.
ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವವರೆಗೆ ಈ ಆದೇಶಕ್ಕೆ ತಡೆ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಪರ ಹಿರಿಯ ವಕೀಲ ಉದಯ ಹೊಳ್ಳ ಅವರೂ ಅರ್ಜಿ ಸಲ್ಲಿಸಿದ್ದಾರೆ.
ಇದನ್ನೂ ಓದಿ: G20ಗಾಗಿ ಎರಡು ದಿನ್ನ ಮುನ್ನವೇ ಬಿಡೆನ್ ಭಾರತಕ್ಕೆ: ಶ್ವೇತಭವನ
ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಚುನಾವಣಾ ಅಫಿಡವಿಟ್‌ನಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದು, ಅವರು ಹೊಂದಿರುವ ಆಸ್ತಿಗಳ ನೈಜ ಮೌಲ್ಯವನ್ನು ಮರೆಮಾಚಲಾಗಿದೆ ಎಂಬ ಆರೋಪವಿದೆ. ಚುನಾವಣಾ ಅಕ್ರಮದ ಆರೋಪದ ಮೇರೆಗೆ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಸೆಪ್ಟೆಂಬರ್ 1 ರಂದು ಹೈಕೋರ್ಟ್ ಆದೇಶಿಸಿತ್ತು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.