ಬೆಂಗಳೂರು: ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಅವರ ಅಸಿಂಧು ಕೋರಿ ಸಲ್ಲಿಕೆಯಾಗಿದ್ದ ಚುನಾವಣಾ ತಕರಾರು ಅರ್ಜಿ ಸಂಬಂಧ ಅವರಿಗೆ ನೋಟಿಸ್ ಜಾರಿಗೊಳಿಸುವಂತೆ ಹೈಕೋರ್ಟ್ ಆದೇಶಿಸಿದೆ.
ಸಂಪಂಗಿ ರಾಮನಗರದ ಬಿ.ಲಕ್ಷ್ಮೀ ದೇವಿ ಎಂಬುವರು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು ವಿಚಾರಣೆ ನಡೆಸಿತು.
ಕಾಂಗ್ರೆಸ್ ಪಕ್ಷ ಪ್ರಕಟಿಸಿದ ಗ್ಯಾರಂಟಿ ಯೋಜನೆಗಳು ಕೊಡುಗೆ ಹಾಗೂ ಭರವಸೆಯ ಸ್ವರೂಪ ಹೊಂದಿವೆ. ಗ್ಯಾರಂಟಿ ಯೋಜನೆಗಳನ್ನು ಪಕ್ಷದ ಅಭ್ಯರ್ಥಿಗಳ ಒಪ್ಪಿಗೆ ಮೇರೆಗೆ ಪ್ರಕಟಿಸಲಾಗಿದೆ. ಅವು ಶಿವಾಜಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತಹಾಕಲು ಮತದಾರರನ್ನು ಪ್ರೇರೇಪಿಸಿವೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ: ʼಕಾವೇರಿʼ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆ!
ಈ ಮೂಲಕ ರಿಜ್ವಾನ್ ಅರ್ಷದ್ ಚುನಾವಣೆಯಲ್ಲಿ ಅಕ್ರಮ ಎಸಗಿದ್ದಾರೆ. ಮತದಾರರಿಗೆ ಆಮಿಷ ನೀಡುವುದು ಲಂಚ ಮತ್ತು ಭ್ರಷ್ಟಚಾರಕ್ಕೆ ಸಮ. ಆದ್ದರಿಂದ ರಿಜ್ವಾನ್ ಅರ್ಷದ್ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಲಾಗಿದೆ.
ಹಾಗಾಗಿ ರಿಜ್ವಾನ್ ಅರ್ಷದ್‌ಗ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ. ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಕೋರ್ಟ್ ಮುಂದೂಡಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.