ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪುನರ್ ಪರಿಶೀಲಿಸಲು ಸಿಎಂ ಸಿದ್ದರಾಮಯ್ಯ ಬರೆದಿರುವ ಪತ್ರವನ್ನು ಡಿ.ಕೆ ಶಿವಕುಮಾರ್ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಹಸ್ತಾಂತರಿಸಿದ್ದಾರೆ. ರಾಜ್ಯದಲ್ಲಿ ಮಳೆ ಅಭಾವ ಹಿನ್ನೆಲೆ ಉಂಟಾಗಿರುವ ನೀರಿನ ಕೊರತೆ ಸಂಬಂಧ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಿದ್ದು, ಹೀಗಿದ್ದರೂ ಪ್ರಾಧಿಕಾರ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿತ್ತು.
ಇಂದು ರಾಜಸ್ಥಾನದ ಜೈಪುರದಲ್ಲಿ ಕೇಂದ್ರ ಸಚಿವರ ಭೇಟಿಯಾಗಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಈ ಪತ್ರ ಹಸ್ತಾಂತರಿಸಿದ್ದಾರೆ.
ಇದನ್ನೂ ಓದಿ: ಫ್ಯಾಕ್ಟ್ ಚೆಕ್‌ಗಾಗಿ ಕಮಿಟಿ ರಚನೆ ಮಾಡ್ತೇವೆ :ಪ್ರಿಯಾಂಕ್ ಖರ್ಗೆ
ಕರ್ನಾಟಕ ರಾಜ್ಯ ಇಷ್ಟು ದಿನಗಳ ಕಾಲ ಪ್ರಾಧಿಕಾರದ ಆದೇಶ ಪಾಲನೆ ಮಾಡಿದೆ. ಬರ ಹಿನ್ನೆಲೆಯಲ್ಲಿ ಪ್ರಸ್ತುತ ಕಾವೇರಿ ನದಿಯ ಆಣೆಕಟ್ಟುಗಳಲ್ಲಿರುವ ನೀರು ರಾಜ್ಯದ ಬಳಕೆಗೆ ಮಾತ್ರ ಸಿಗುವಷ್ಟಿದೆ. ನಿರೀಕ್ಷಿತ ಮಟ್ಟದಲ್ಲಿ ಮಳೆ ಬಾರದ ಹಿನ್ನೆಲೆಯಲ್ಲಿ ಕರ್ನಾಟಕ ನೀರು ಹರಿಸುವ ಸ್ಥಿತಿಯಲ್ಲಿ ಇಲ್ಲ. ಹೀಗಾಗಿ ಈ ಮೇಲ್ಕಂಡ ಎಲ್ಲಾ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು, ಪ್ರಾಧಿಕಾರ ತನ್ನ ಆದೇಶ ಮರುಪರಿಶೀಲಿಸುವಂತೆ ಸೂಚಿಸಬೇಕು ಎಂದು ಪತ್ರದಲ್ಲಿ ವಿವರಿಸಲಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.