ಬೆಂಗಳೂರು: ನಾಯಕನಿಲ್ಲದ ದೋಣಿಯಂತಾಗಿದ್ದ ಬಿಜೆಪಿ ಪಕ್ಷಕ್ಕೆ ಹೊಸ ಹುರುಪು ತುಂಬಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ನೂತನ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ವಿಜಯೇಂದ್ರ ಆಯ್ಕೆಯಿಂದ ಪಕ್ಷದ ಕಾರ್ಯಕರ್ತರಲ್ಲಿ ಹಾಗೂ ಮುಖಂಡರಲ್ಲಿ ಹೊಸ ಹುಮ್ಮಸ್ಸು ತುಂಬಿದಂತಾಗಿದೆ. ಇದೇ ಸಂದರ್ಭದಲ್ಲಿ ಪಕ್ಷದ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ವಿಜಯೇಂದ್ರ ಅವರು ಮೊದಲ ಹೆಜ್ಜೆಯಾಗಿ ಈ ಶುಕ್ರವಾರ ಶಾಸಕಾಂಗ ಸಭೆಯನ್ನು ಕರೆದಿದ್ದಾರೆ.
ಇಂದು ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ರಾಜ್ಯಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಲಾಯಿತು. ಪಕ್ಷದ ಎಲ್ಲ ಮುಖಂಡರು ರಾಜ್ಯಾಧ್ಯಕ್ಷರಿಗೆ ಶುಭ ಕೋರಿದರು. ಈ ಸಂದರ್ಭ ಮಾತನಾಡಿದ ವಿಜಯೇಂದ್ರ, ‘ಪಕ್ಷದ ಯಾವೊಬ್ಬ ಕಾರ್ಯಕರ್ತನೂ ತಲೆ ತಗ್ಗಿಸುವ ಕೆಲಸ ನನ್ನಿಂದ ಆಗಲ್ಲ’ ಎಂದು ವಿಶ್ವಾಸ ನೀಡಿದ್ದಾರೆ.
ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರಗೆ ಶುಭಕೋರಿದ ಹೆಚ್‌ಡಿಕೆ, ಕಟೀಲ್!
ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ನೂತನ ರಾಜ್ಯಾಧ್ಯಕ್ಷರು ಶಾಸಕರೊಂದಿಗೆ ಚರ್ಚೆ ನಡೆಸಲಿದ್ದು, ಪಕ್ಷ ಬಲಪಡಿಸುವ ಬಗ್ಗೆ ಚಿಂತನೆ ನಡೆಸಲಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಗೂ ಪಕ್ಷದ ಎಲ್ಲ ಶಾಸಕರನ್ನು ಸಂಘಟಿಸಿ, ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಬಗ್ಗೆ ಯೋಜನೆಗಳನ್ನು ರೂಪಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ರೌಡಿಶೀಟರ್‌ಗಳಿಗೆ ಜೋಶಿ ಬೆಂಬಲ: ಅರವಿಂದ್ ಏಗನಗೌಡರ
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.