ಕೋಲಾರ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಇದೆ ಮೊದಲ ಬಾರಿಗೆ ಕುರುಡುಮಲೆ ಗಣಪತಿ ದೇವಾಲಯಕ್ಕೆ ಭೇಟಿ ನೀಡಿರುವ ಬಿ.ವೈ ವಿಜಯೇಂದ್ರ, ಅವರಿಗೆ ಜಿಲ್ಲೆಯ ಜನ ಹೂಮಾಲೆ ಹಾಕಿ ಅದ್ದೂರಿ ಸ್ವಾಗತ ನೀಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನಿರ್ದೇಶನದ ಮೇರೆಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿ ಆದೇಶ ಹೊರಡಿಸಿದ ಬೆನ್ನಲೇ ನೂತನ ರಾಜ್ಯಧ್ಯಕ್ಷರು, ರಾಜಕೀಯ ಗಣ್ಯರನ್ನು ಭೇಟಿಯಾಗುತ್ತಿದ್ದಾರೆ. ಇದರೊಂದಿಗೆ ಅನೇಕ ಸ್ಥಳಗಳನ್ನು ಬೇಟಿಯಾಗಿಟ್ಟಿರುವ ವಿಜಯೇಂದ್ರ ಅವರು ಇಂದು ಜಿಲ್ಲೆಯ ಮುಳಬಾಗಲು ಕುರುಡುಮಲೆ ಗಣೇಶನ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ.


ಇದನ್ನೂ ಓದಿ: ಸರ್ಕಾರಿ ಪರೀಕ್ಷೆ ಆಕ್ರಮ ತಡೆಗೆ ʼಕೆಇಎʼ ಹೊಸ ಪ್ಲಾನ್..!
ಕುರುಡುಮಲೆ ಗಣೇಶ ದೇವಸ್ಥಾನ ಅತ್ಯಂತ ಹೆಸರುವಾಸಿಯಾಗಿದೆ. ಐತಿಹಾಸಿಕ ಮಹತ್ವ ಹೊಂದಿರುವ ಈ ದೇವಾಯದಲ್ಲಿನ ಏಕಶಿಲಾ ಸಾಲಿಗ್ರಾಮ ಗಣೇಶನ ದರ್ಶನ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಗಣೇಶನಿಗೆ ಪೂಜೆ ಸಲ್ಲಿಸಲಿರುವ ನೂತನ ರಾಜ್ಯಾಧ್ಯಕ್ಷರು, ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಕುರುಡುಮಲೆಯಿಂದ ಚಾಲನೆ ನೀಡಲಿದ್ದಾರೆ.
ಇದನ್ನೂ ಓದಿ: ಸಿಎಂ ತವರೂರಿನಲ್ಲೇ ಅನ್ನಭಾಗ್ಯ ಯೋಜನೆಯ ದುರುಪಯೋಗ
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.v