Wednesday, November 29, 2023
spot_img
- Advertisement -spot_img

ಜನರು ಅವಕಾಶ ಕೊಟ್ಟಿದ್ದಾರೆ ಸರಿಯಾಗಿ ಸರ್ಕಾರ ನಡೆಸಿ; ಕಾಂಗ್ರೆಸ್ ಗೆ ಕೇಂದ್ರ ಸಚಿವ ಜೋಶಿ ಸಲಹೆ

ಹುಬ್ಬಳ್ಳಿ: ಕಾಂಗ್ರೆಸ್‌ನಲ್ಲಿ ದೊಡ್ಡ ಪ್ರಮಾಣದ ಷಡ್ಯಂತ್ರ ನಡೆಯುತ್ತಿದೆ. ಅವರವರ ಜಗಳದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಇದೊಂದು ನೆಗೆಟಿವ್ ಸರ್ಕಾರವಾಗಿ ಪರಿವರ್ತನೆಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹಳ್ಳಿಗಳಿಗೆ, ರೈತರಿಗೆ ಸಮರ್ಪಕ ವಿದ್ಯುತ್ ಸಿಗುತ್ತಿಲ್ಲ. ವಿಪರೀತವಾದ ಒಳಜಗಳದಿಂದ ಆಡಳಿತ ಯಂತ್ರ ಸಂಪೂರ್ಣ ಹದಗೆಟ್ಟಿದೆ. ಎರಡು ಮೂರು ದಿನಗಳಲ್ಲಿ ವಿಪಕ್ಷ ನಾಯಕರ ನೇಮಕ ಆಗುತ್ತದೆ. ರಾಷ್ಟ್ರ ನಾಯಕರ ಜೊತೆ ಚರ್ಚಿಸಿ ಸದ್ಯದಲ್ಲಿಯೇ ಎರಡೂ ಸದನಗಳ ವಿಪಕ್ಷ ನಾಯಕರನ್ನು ಆಯ್ಕೆ ಮಾಡುತ್ತೇವೆ. ಸರ್ಕಾರದ ನಿಷ್ಕ್ರಿಯತೆ, ವೈಫಲ್ಯದ ವಿರುದ್ಧ ಹೋರಾಡುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ಬಳಿಕ ಹಿಂದುತ್ವದ ಕಡೆಗೆ ವಾಲ್ತಾರಾ ದಳಪತಿ? ಏನಿದು ಮೈತ್ರಿ ಪಕ್ಷಗಳ ತಂತ್ರಗಾರಿಕೆ?

ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಒಂದು ವರ್ಗವನ್ನು ಕಡೆಗಣಿಸಲಾಗುತ್ತಿದೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ವರ್ಗಾವಣೆಯಲ್ಲಿ ಭ್ರಷ್ಟಾಚಾರವಿದೆಯೆಂದು ಅವರದ್ದೇ ಪಕ್ಷದ ಶಾಸಕರು ಹೇಳಿದ್ದಾರೆ. ಆರು ತಿಂಗಳಲ್ಲಿ ಈ ಪ್ರಮಾಣದ ಆಡಳಿತ ವಿರೋಧಿ ಅಲೆ ನಿರ್ಮಾಣವಾಗುತ್ತದೆ ಎಂದು ನಾವು ಕೂಡ ಅಂದುಕೊಂಡಿರಲಿಲ್ಲ. ಜನ ಐದು ವರ್ಷ ಆಡಳಿತ ನಡೆಸಲು ಅವಕಾಶ ಕೊಟ್ಟಿದ್ದಾರೆ. ಸರಿಯಾಗಿ ಸರ್ಕಾರ ನಡೆಸಿ ಎಂದು ನಾನು ಕಾಂಗ್ರೆಸ್‌ನವರಿಗೆ ಆಗ್ರಹಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ʼಯಡಿಯೂರಪ್ಪ ಮಗ ಎಂದು ವಿಜಯೇಂದ್ರಗೆ ಜವಾಬ್ದಾರಿ ಕೊಟ್ಟಿಲ್ಲʼ

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles