ಬೆಂಗಳೂರು: ಬಿಜೆಪಿ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಲಂಚ ಪ್ರಕರಣದ ತನಿಖೆಯನ್ನು ಎಸ್‌ಐಟಿ ಅಥವಾ ಸಿಬಿಐಗೆ ನೀಡಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸಿದೆ.
ಶ್ರೀರಾಮಸೇನೆ ದಾವಣಗೆರೆ ಘಟಕದ ಅಧ್ಯಕ್ಷ ಮಣಿಕಂಠ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿ ಈ ಕ್ರಮ ತೆಗದುಕೊಂಡಿದೆ.
ಇದನ್ನೂ ಓದಿ: ಮಹತ್ವದ ಕ್ಯಾಬಿನೆಟ್ ಸಭೆ; ಬರಪೀಡಿತ ತಾಲೂಕುಗಳ ಘೋಷಣೆ ಸಾಧ್ಯತೆ
ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದರು. ಆದರೆ ಈ ಅರ್ಜಿಗೆ ಸ್ಪಂಧಿಸಿದ್ದ ನ್ಯಾಯಾಲಯ, ಮೊದಲು ಸರ್ಕಾರ ಅಥವಾ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಲು ತಿಳಿಸಿತ್ತು. ಈ ಹಿನ್ನೆಲೆ ಪ್ರಾಧಿಕಾರಕ್ಕೆ ಅರ್ಜಿಸಲ್ಲಿಸಲಾಗಿತ್ತಾದರೂ ಕೂಡ ಯಾವುದೇ ಸ್ಪಂದನೆ ಸಿಗದ ಹಿನ್ನೆಲೆ ಅರ್ಜಿದಾರರು ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇದನ್ನೂ ಓದಿ: ಮಧು ಬಂಗಾರಪ್ಪ ನಡೆಗೆ ಸ್ಪಪಕ್ಷದವರ ಅಸಮಾಧಾನ
ಈ ಅರ್ಜಿ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಈ ಹಿಂದೆ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸಿದ ಮನವಿಯನ್ನು ಪರಿಗಣಿಸುವಂತೆ ನಿರ್ದೇಶನ ನೀಡಲಾಗುವುದು ಎಂದು ಅರ್ಜಿದಾರರಿಗೆ ತಿಳಿಸಿ, ಪ್ರಕರಣದಲ್ಲಿ ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಪರಿಗಣಿಸಿ 8 ವಾರಗಳಲ್ಲಿ ಕಾನೂನು ರೀತಿ ಕ್ರಮ ಜರುಗಿಸುವಂತೆ ಸೂಚಿಸಿ ಅರ್ಜಿಯನ್ನು ಇತ್ಯರ್ಥಗೊಳಿಸಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.