Monday, December 4, 2023
spot_img
- Advertisement -spot_img

ಸರ್ಕಾರದಿಂದ ಕೇಸ್‌ ದಾಖಲು ಆರೋಪ; ಬಿಜೆಪಿಯಿಂದ ವಕೀಲರ ತಂಡ ರಚನೆ

ಬೆಂಗಳೂರು: ರಾಜ್ಯ ಬಿಜೆಪಿಯು ಸಂತ್ರಸ್ತರ ನೆರವಿಗಾಗಿ ರಾಜ್ಯ ಮಟ್ಟದ ವಕೀಲರ ತಂಡವನ್ನು ರಚಿಸಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸೋಶಿಯಲ್‌ ಮೀಡಿಯಾಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸುವವರ ಕೇಸ್‌ ದಾಖಲಿಸುತ್ತಿರುವ ಹಿನ್ನೆಲೆ ಸಂತ್ರಸ್ತರ ನೆರವಿಗಾಗಿ ಈ ತಂಡ ರಚನೆಯಾಗಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಬಿಜೆಪಿ ರಾಜ್ಯ ಕಾರ್ಯದರ್ಶಿ ಕೇಶವ್ ಪ್ರಸಾದ್‌, ರಾಜ್ಯ ಕಾಂಗ್ರೆಸ್‌ ಸರ್ಕಾರವು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿದೆ.

ಕಳೆದ 100 ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರವನ್ನು ಟೀಕಿಸುವವರು ಮತ್ತು ಮಾಧ್ಯಮಗಳ ಪ್ರತಿನಿಧಿಗಳ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ ಅವರನ್ನು ಬೆದರಿಸುವ ಕೆಲಸ ಮಾಡುತ್ತಿದೆ. ಇದು ಖಂಡನೀಯʼ ಎಂದಿದ್ದಾರೆ.

ಇದನ್ನೂ ಓದಿ: ಪಾಡ್‌ಕಾಸ್ಟ್‌ ಆರಂಭಿಸಿದ ಸ್ಟಾಲಿನ್‌; ಪ್ರಧಾನಿ ಮೋದಿಗೆ ಟಕ್ಕರ್‌!

ಇನ್ನು ಇಂದು ರಾಜ್ಯ ಮಟ್ಟದ ವಕೀಲರ ತಂಡ ಯಾವ ರೀತಿ ಕಾರ್ಯ ನಿರ್ವಹಿಸಬೇಕು ಎಂಬುದರ ಬಗ್ಗೆ ಸಭೆ ನಡೆಸಲಾಯಿತು. ಸಭೆಯಲ್ಲಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್‌ ಜಿ.ವಿ, ರಾಜ್ಯ ಉಪಾಧ್ಯಕ್ಷ ನಿರ್ಮಲ್‌ ಕುಮಾರ್ ಸುರಾನ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಸೇರಿದಂತೆ ಹಲವರು ಇದ್ದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles