ಚಿತ್ರದುರ್ಗ: ಬಡತನದಿಂದಾಗಿ ವಿದ್ಯುತ್ ಸಂಪರ್ಕವೂ ಇಲ್ಲದೆ, ಕತ್ತಲೆಯಲ್ಲೇ ಒಂಟಿ ಜೀವನ ದೂಡುತ್ತಿದ್ದ ಚಿತ್ರದುರ್ಗದ ವೃದ್ಧೆಗೆ ರಾಜ್ಯ ಸರ್ಕಾರ ಬೆಳಕಿನ ಭಾಗ್ಯ ಕಲ್ಪಿಸಿದೆ.
ಇನ್ನು ಈ ವಿಚಾರ ತಿಳಿದ 24 ಗಂಟೆಯೊಳಗೆ ಆ ವೃದ್ಧೆಯ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಚಳ್ಳಕೆರೆ ತಾಲ್ಲೂಕಿನ ಬಸಾಪುರ ಗ್ರಾಮದ ದೊಣಮ್ಮ ಎಂಬ ವೃದ್ಧ ಮಹಿಳೆ ಬಡತನದ ಕಾರಣಕ್ಕೆ ವಿದ್ಯುತ್ ಸಂಪರ್ಕ ಪಡೆಯದೆ ದೀಪದ ಆಸರೆಯಲ್ಲಿ ಬದುಕು ಸಾಗಿಸುತ್ತಿದ್ದ ವಿಚಾರ ಸ್ಥಳೀಯರಾದ ಮಹೇಂದ್ರ ಅವರು ನಮ್ಮ ಕಚೇರಿಯ ಗಮನಕ್ಕೆ ತಂದಿದ್ದರು.
ಇನ್ನು ಈ ಸಮಸ್ಯೆಗೆ ತಕ್ಷಣವೇ ಸ್ಪಂದಿಸಿ, ಕೇವಲ 24 ಗಂಟೆಗಳ ಒಳಗೆ ಅವರ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದೇವೆ. ಬದಲಾವಣೆ ಮೂಡಿಸಲು ನಾವು ಸಿದ್ಧರಿದ್ದೇವೆ. ನಮ್ಮ ಈ ಕಾರ್ಯಕ್ಕೆ ನಿಮ್ಮ ಸಹಕಾರವೂ ಇರಲಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಗೃಹಜ್ಯೋತಿ ಯೋಜನೆ ಮೊದಲು ಇಂತರಿಗೆ ತಲುಪಬೇಕು ಎಂದು ಈ ವೃದ್ಧೆಯನ್ನು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಲವರು ಸರ್ಕಾರವನ್ನು ಆಗ್ರಹಿಸಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.