ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವರ್ಗಾವಣೆ ಹಾಗೂ ಪೋಸ್ಟಿಂಗ್ ದಂಧೆ ಆರೋಪ ಕೇಳಿ ಬಂದ ಹಿನ್ನೆಲೆ, ಇನ್ನು ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆ ನಡೆಯಲು ಸಿಎಂ ಅನುಮತಿ ಕಡ್ಡಾಯ ಎಂದು ಸರ್ಕಾರ ಹೊಸ ಆದೇಶ ಹೊರಡಿಸಿದೆ.
ಜೊತೆಗೆ ಇನ್ನು ಮುಂದೆ ಮುಖ್ಯಮಂತ್ರಿಗಳ ಅನುಮತಿ ಪಡೆದೇ ಇಲಾಖಾವಾರು ವರ್ಗಾವಣೆ ಮಾಡಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ. ಯಾವುದೇ ವರ್ಗಾವಣೆಗೂ ಸಿಎಂ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಪರ ಕಾರ್ಯದರ್ಶಿಯ ಅವರು ಈ ಸುತ್ತೋಲೆ ಪ್ರಕಟಿಸಿದ್ದು, ಸಿಎಂ ಪೂರ್ವಾನುಮತಿ ಪಡೆಯದೇ ವರ್ಗಾವಣೆ ಮಾಡಿದಲ್ಲಿ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ಕೂಡ ನೀಡಲಾಗಿದೆ.
ಇದನ್ನೂ ಓದಿ: ಹೆಚ್‌ಡಿಕೆ ಅವಧಿಯಲ್ಲಿ ವರ್ಗಾವಣೆ ಆಗಿರಲಿಲ್ವಾ?: ಸಿಎಂ ಸಿದ್ದರಾಮಯ್ಯ
ಅನುಮತಿ ಪಡೆಯದಿದ್ದರೆ ಸರ್ಕಾರದ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಇಲಾಖೆಯ ಮುಖ್ಯಸ್ಥರೇ ನೇರ ಹೊಣೆಗಾರರಾಗುತ್ತಾರೆ. ಒಂದು ವೇಳೆ ವರ್ಗಾವಣೆ ಮಾಡಿ, ನಂತರ ಸಿಎಂ ಅವರ ಅನುಮತಿ ಪಡೆಯುವ ಅವಕಾಶವೂ ಇಲ್ಲ ಎಂದೂ ಸುತ್ತೋಲೆಯಲ್ಲಿ ಸ್ಪಷ್ಟವಾಗಿ ತಿಳಿಸಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.