Monday, December 11, 2023
spot_img
- Advertisement -spot_img

ಡೆಲಿವರಿ ಸಿಬ್ಬಂದಿಗೆ ಗುಡ್‌ನ್ಯೂಸ್‌ ಕೊಟ್ಟ ರಾಜ್ಯ ಸರ್ಕಾರ

ಬೆಂಗಳೂರು: ಮನೆಬಾಗಿಲಿಗೆ ಸೇವೆ ನೀಡುತ್ತಿರುವ ಡೆಲಿವರಿ ಸಿಬ್ಬಂದಿಗೆ ರಾಜ್ಯ ಸರ್ಕಾರವು ಬಂಪರ್‌ ಗಿಫ್ಟ್‌ ನೀಡಿದೆ. ಡೆಲಿವರಿ ಬಾಯ್ಸ್‌ಗಳಿಗೆ ( ಗಿಗ್‌ ಕಾರ್ಮಿಕರು ) 2 ಲಕ್ಷ ರೂಪಾಯಿ ಜೀವವಿಮೆ ಮತ್ತು 2 ಲಕ್ಷ ರೂಪಾಯಿ ಅಪಘಾತ ಪರಿಹಾರ ವಿಮಾ ಸೌಲಭ್ಯ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ, ದೇಶದಲ್ಲೇ ಮೊದಲ ಬಾರಿಗೆ ನಮ್ಮ ಸರ್ಕಾರವು ಈ ಯೋಜನೆ ಜಾರಿ ಮಾಡಿದೆ. ಇದು ನಮ್ಮ ನಾಯಕರಾದ ರಾಹುಲ್‌ ಗಾಂಧಿ ಅವರ ಯೋಜನೆ. ಭಾರತ್ ಜೋಡೊ ಪಾದಯಾತ್ರೆಯ ಸಂದರ್ಭದಲ್ಲಿ ಡೆಲಿವರ್ ಬಾಯ್‌ಗಳ ಜೊತೆ ಚರ್ಚೆ ನಡೆಸಿದ್ದಾಗ ಅವರ ಅಸುರಕ್ಷಿತ ಬದುಕಿನ ಬವಣೆಗಳು ರಾಹುಲ್ ಗಾಂಧಿ ಅವರ ಗಮನಕ್ಕೆ ಬಂದಿತ್ತು. ಅವುಗಳನ್ನು ಪರಿಹರಿಸುವ ಭರವಸೆಯನ್ನೂ ಅವರು ನೀಡಿದ್ದರು ಎಂದಿದ್ದಾರೆ.

ಈ ಹಿನ್ನೆಲೆಯಲ್ಲಿ ನೂತನ ವಿಮಾ ಯೋಜನೆಯನ್ನು ರೂಪಿಸಿ ಜಾರಿಗೆ ತಂದಿದ್ದೇವೆ. ರಾಜ್ಯಾದ್ಯಂತ ಗ್ರಾಹಕರಿಗೆ ಆಹಾರ, ದಿನಸಿ, ತರಕಾರಿ ಮುಂತಾದ ಅವಶ್ಯಕ ವಸ್ತುಗಳನ್ನು ಮನೆ ಬಾಗಿಲಿಗೆ ಮುಟ್ಟಿಸುವ ಡೆಲಿವರಿ ಬಾಯ್‌ಗಳು ನಿಗದಿತ ಸಮಯದಲ್ಲಿ ಆರ್ಡರ್ ತಲುಪಿಸಬೇಕೆಂಬ ಕಾರಣಕ್ಕಾಗಿ ಸಂಚಾರ ದಟ್ಟಣೆಯ ನಡುವೆ ಪ್ರಾಣವನ್ನು ಪಣಕ್ಕಿಟ್ಟು, ವಾಹನ ಚಾಲನೆ ಮಾಡುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಮಾತನಾಡಿದ ಬಿ.ಕೆ.ಹರಿಪ್ರಸಾದ್‌ಗೆ ಕಾಂಗ್ರೆಸ್‌ ನೋಟಿಸ್‌

ಇಂತಹ ಅಪಾಯಕಾರಿ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಶ್ರಮಜೀವಿಗಳ ನಿತ್ಯದ ಬದುಕಿನ ಸವಾಲುಗಳನ್ನು ಅರ್ಥೈಸಿಕೊಂಡು, ಅಪಘಾತ, ಪ್ರಾಣಹಾನಿ ಸಂಭವಿಸಿದಾಗ ಅವರ ನೆರವಿಗೆ ಧಾವಿಸಬೇಕು ಎಂಬ ಉದ್ದೇಶದಿಂದ ಈ ವಿಮಾ ಕಾರ್ಯಕ್ರಮವನ್ನು ಬಜೆಟ್‌ನಲ್ಲಿ ಘೋಷಿಸಿ, ಈಗ ಅದನ್ನು ಜಾರಿ ಮಾಡುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles