ಬೆಂಗಳೂರು: ರಾಜ್ಯ ಸರ್ಕಾರವು ದೇವಸ್ಥಾನಗಳಿಗೆ ಮೊದಲ ಕಂತಿನ ತಸ್ತೀಕ್ ಹಣವನ್ನು ಬಿಡುಗಡೆ ಮಾಡಿದೆ.
ಈ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಅವರು ಟ್ವೀಟ್ ಮಾಡಿದ್ದು, 2023-24ನೇ ಸಾಲಿನಲ್ಲಿ ಮೊದಲ ಕಂತಾಗಿ 77,85,54,497 ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದ್ದು ಎಂದು ಮಾಹಿತಿ ನೀಡಿದ್ದಾರೆ.


ಅಲ್ಲದೆ ಯಾವುದೇ ನಿಬಂಧನೆಗಳಿಲ್ಲದೆ, ತುರ್ತಾಗಿ ಸಂಬಂಧಪಟ್ಟ ಸಂಸ್ಥೆ, ದೇವಾಲಯಗಳಿಗೆ ತಹಸೀಲ್ದಾರ್ ಅವರ ಖಾತೆಯಿಂದ ಹಣ ಬಿಡುಗಡೆ ಮಾಡಬೇಕು. ಅಲ್ಲಿಂದ ಅರ್ಚಕರ ಖಾತೆಗೆ ಹಣ ಜಮಾಗೊಳ್ಳುವಂತೆ ಸೂಚಿಸಲಾಗಿದೆ ಎಂದಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.