ಹೊಸ ದಿಲ್ಲಿ : ಮುಂದುವರೆದ ಜಾತಿಗಳಲ್ಲಿರುವ ಆರ್ಥಿಕವಾಗಿ, ಹಿಂದುಳಿದಿರುವ ಜನರಿಗೆ ದಾಖಲಾತಿ, ಸರ್ಕಾರಿ ಉದ್ಯೋಗಗಳಲ್ಲಿ ಶೇ.10 ರಷ್ಟು ಮೀಸಲಾತಿ ಒದಗಿಸುವ ಸಂವಿಧಾನದ 103 ನೇ ತಿದ್ದುಪಡಿಯನ್ನು ಸುಪ್ರಿಂ ಕೋರ್ಟ್ ಎತ್ತಿ ಹಿಡಿದಿದೆ.
ಐವರು ನ್ಯಾಯಾಧೀಶರ ಪೈಕಿ ಮೂವರು ತಿದ್ದುಪಡಿಯ ಸಿಂಧುತ್ವವನ್ನು ಎತ್ತಿಹಿಡಿದಿದ್ದಾರೆ.
ಭಾರತದ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್, ನ್ಯಾಯ ಮೂರ್ತಿಗಳಾದ ದಿನೇಶ್ ಮಹೇಶ್ವರಿ, ಎಸ್ ರವೀಂದ್ರ ಭಟ್, ಬೇಲಾ ಎಂ ತ್ರಿವೇದಿ ಹಾಗೂ ಜೆಬಿ ಪರ್ದಿವಾಲಾರನ್ನು ಒಳಗೊಂಡ ಸಂವಿಧಾನ ಪೀಠ ಈ ತೀರ್ಪು ನೀಡಿತು. ಐವರು ನ್ಯಾಯಮೂರ್ತಿಗಳ ಪೈಕಿ ಮೂವರು ತಿದ್ದುಪಡಿಯ ಸಿಂಧುತ್ವವನ್ನು ಎತ್ತಿಹಿಡಿದಿದ್ದಾರೆ.
ಇಬ್ಬರು ನ್ಯಾಯ ಮೂರ್ತಿಗಳು ಮಾತ್ರ ಭಿನ್ನಮತದ ತೀರ್ಪು ನೀಡಿದ್ದಾರೆ. 103 ನೇ ಸಾಂವಿಧಾನಿಕ ತಿದ್ದುಪಡಿಯನ್ನು ಎತ್ತಿ ಹಿಡಿದ ನ್ಯಾಯ ಮೂರ್ತಿ ದಿನೇಶ್, ಮಹೇಶ್ವರಿ, ಇದು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುವುದಿಲ್ಲ ಎಂದು ಹೇಳಿದರು. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಘಡ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಸೋತ ಕೂಡಲೇ ಕೇಂದ್ರ ಸರ್ಕಾರವು 103 ನೇ ಸಾಂವಿಧಾನಿಕ ತಿದ್ದುಪಡಿಯ ಮೂಲಕ ಇಡಬ್ಲ್ಯುಎಸ್ ಮೀಸಲಾತಿಯನ್ನು 2019 ರ ಸಾರ್ವತ್ರಿಕ ಚುನಾವಣೆಯ ಮೊದಲು ಆರಂಭಿಸಲಾಯಿತು.
ಕೇಂದ್ರ ಸರ್ಕಾರವು 2019 ರಲ್ಲಿ ಸಂವಿಧಾನಕ್ಕೆ 103 ನೇ ತಿದ್ದುಪಡಿ ತಂದಿತ್ತು. ಆ ಮೂಲಕ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಶೇ.10 ರಷ್ಟು ಮೀಸಲಾತಿ ಜಾರಿಗೆ ತಂದಿತ್ತು. ಇದು ಸಂವಿಧಾನ ಬಾಹಿರ, ಸಾಮಾಜಿಕ ನ್ಯಾಯಕ್ಕೆ ವಿರುದ್ಧ ಎಂದು ಸುಪ್ರೀಂ ಕೋರ್ಟ್ ಗೆ ಹಲವರು ಅರ್ಜಿ ಸಲ್ಲಿಸಿದ್ದರು.