ಧಾರವಾಡ: ಸಿಪಿಐ ಕಾಡದೇವರಮಠರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನಿಂದನೆ ಮಾಡಿದ್ದಾರೆ. ಕ್ಷಮೆ ಕೇಳಬೇಕು ಎಂದು ದಲಿತ ಪರ ಸಂಘಟನೆ ಮುಖಂಡರು ಆಗ್ರಹಿಸಿದ್ದಾರೆ.
ಪ್ರಾಮಾಣಿಕ ಪೊಲೀಸ್ ಅಧಿಕಾರಿಗೆ ರಕ್ಷಣೆ ಇಲ್ಲದಂತಾಗಿದ್ದು, ಕೂಡಲೇ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಪೊಲೀಸ್ ಅಧಿಕಾರಿಯ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ದಲಿತಪರ ಸಂಘಟನೆ ಮುಖಂಡ ಲಕ್ಷ್ಮಣ ದೊಡ್ಡಮನಿ ನೇತೃತ್ವದಲ್ಲಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದ್ದಾರೆ.
ಇದನ್ನೂ ಓದಿ: ಇಂದು ಫೈನಲ್ ಆಗುತ್ತಾ ವಿಪಕ್ಷ ನಾಯಕನ ಹೆಸರು?; ಶಾಸಕಾಂಗ ಸಭೆ ಕರೆದ ವಿಜಯೇಂದ್ರ!
ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿಯವರಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದ್ದಾರೆ. ಇನ್ನೂ ರೌಡಿಶೀಟರಗಳನ್ನ ಇಟ್ಟುಕೊಂಡು ಸಿಪಿಐಯವರನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬೈಯುತ್ತಾರೆ. ಇದು ಸರಿಯಲ್ಲ. ಕೇಂದ್ರ ಸಚಿವರು ಕೂಡಲೇ 15 ದಿನದೊಳಗೆ ಸಿಪಿಐಗೆ ಕ್ಷಮೆ ಕೇಳಬೇಕು ಇಲ್ಲದಿದ್ರೆ ಜಿಲ್ಲೆಯಾದ್ಯಂತ ಪತ್ರ ಚಳವಳಿ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆಯಲಾಗುವುದು ಎಂದು ಜಿಲ್ಲೆಯ ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.
ಸುಖಾಸುಮ್ಮನೆ ಠಾಣೆಗೆ ಕರೆಸಿ ಬಿಜೆಪಿ ಕಾರ್ಯಕರ್ತರಿಗೆ ಥಳಿಸಿದ ಆರೋಪ ಸಂಬಂಧ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಧಾರವಾಡದ ಶಹರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಕಾಡದೇವರಮಠರನ್ನು ತರಾಟೆಗೆ ತೆಗೆದುಕೊಂಡಿದ್ದರು. ಠಾಣೆಗೆ ಕರೆಸಿ ಥಳಿಸಲು ನಿಮಗೇನು ಅಧಿಕಾರ ಇದೆ? ತಪ್ಪು ಮಾಡಿದ್ದರೆ ಶಿಕ್ಷೆ ನೀಡಿ. ಅನಾವಶ್ಯಕವಾಗಿ ಬಿಜೆಪಿ ಕಾರ್ಯಕರ್ತರಿಗೆ ತೊಂದರೆ ನೀಡಬೇಡಿ ಎಂದು ಖಡಕ್ ಎಚ್ಚರಿಕೆ ನೀಡಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.