ಧಾರವಾಡ: ರಾಜ್ಯದಲ್ಲಿ ಯಾವುದೇ ಇಲಾಖೆಯಲ್ಲಿ ಹಗರಣವಾಗಿದ್ದರೂ ಕೂಡ, ಸರ್ಕಾರದಿಂದ ತನಿಖೆ ಮಾಡುತ್ತೇವೆ, ಆರೋಗ್ಯ ಇಲಾಖೆಯಲ್ಲಿ ದೊಡ್ಡ ಮಟ್ಟದ ಹಗರಣ ಆಗಿದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದ್ರು.
ಧಾರವಾಡದಲ್ಲಿ ಮಾತನಾಡಿ, ವಿಪಕ್ಷದಲ್ಲಿದ್ದಾಗ ನಾವು ಒತ್ತಾಯ ಮಾಡಿದ್ದೇವು, ಆದರೆ ಈಗ ನಮ್ಮದೇ ಆಡಳಿತವಿದೆ. ಅದಕ್ಕೆ ತನಿಖೆ ಮಾಡಲಾಗುತ್ತದೆ ಎಂದರು. ಇನ್ನೂ ರಾಜ್ಯದಲ್ಲಿ ಆರೋಗ್ಯ ಇಲಾಖೆಯಲ್ಲಿ ದೊಡ್ಡ ಮಟ್ಟದ ಅವ್ಯವಹಾರ ಆಗಿದೆ ಎಂದು ದೂರಿದರು.
ಇದನ್ನೂ ಓದಿ: ಟಿಟಿಡಿ ಆಡಳಿತ ಮಂಡಳಿಯಲ್ಲಿ ಸ್ಥಾನ ಪಡೆದ ಆರ್ ವಿ ದೇಶಪಾಂಡೆ
ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಮಾತನಾಡಿ, ಬೇರೆ ಬೇರೆ ಜಿಲ್ಲೆಯಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಗೆ ಬರ್ತಾ ಇದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಇಬ್ಬರು ಬಿಜೆಪಿ ಹಿರಿಯ ನಾಯಕರು ಕಾಂಗ್ರೆಸ್ ಗೆ ಬರ್ತಾರೆ ಅಂತಾ ಸುದ್ದಿ ಓಡಾಡ್ತಿದೆ, ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹಾಗೂ ಕುಂದಗೋಳದ ಮಾಜಿ ಬಿಜೆಪಿ ಶಾಸಕ ಎಸ.ಐ ಚಿಕ್ಕನಗೌಡ್ರ ಕಾಂಗ್ರೆಸ್ ಪಕ್ಷಕ್ಕೆ ಬರ್ತಾರೆ ಎನ್ನುವ ಮಾಹಿತಿ ಇದೆ ಆದ್ರೆ ಇದುವರೆಗೂ ನನ್ನ ಸಂಪರ್ಕ ಮಾಡಿಲ್ಲ ಎಂದು ಇದೇ ವೇಳೆ ತಿಳಿಸಿದರು.
ಇನ್ನೂ ಧಾರವಾಡ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಗೆ ಯಾರನ್ನು ಅಭ್ಯರ್ಥಿ ಮಾಡಬೇಕು ಎಂದು ಚರ್ಚೆ ನಡೆಸಲಾಗುತ್ತದೆ ಎಂದು ವಿವರಿಸಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.