ಶಿವಮೊಗ್ಗ : ಬಿಜೆಪಿಯಲ್ಲಿ ಹೆಣ ಇಟ್ಟುಕೊಳ್ಳುವ ವ್ಯವಸ್ಥೆ ಇಲ್ಲ. ನಮ್ಮ ಪಕ್ಷ ಯಾವಾಗಲೂ ಜೀವ ಉಳಿಸಿಕೊಳ್ಳುವ ಕೆಲಸ ಮಾಡುತ್ತದೆ ಎಂದು ಸಂಸದ ಬಿವೈ ರಾಘವೇಂದ್ರ, ಬಿಜೆಪಿಗೆ ನನ್ನ ಹೆಣವೂ ಹೋಗುವುದಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ನೀಡಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಜೀವ ಉಳಿಸಿಕೊಳ್ಳುವ ಕಾರ್ಯಗಳು ನಡೆಯುತ್ತವೆ. ಹೆಣ ಇಟ್ಟುಕೊಳ್ಳವ ಸಂಸ್ಕ್ರತಿ ಇಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ : ‘ನೀವು ಸಾಯೋದು ಬೇಡ; ನಿಮ್ಮ ಹೆಣ ಬಿಜೆಪಿ ಕಚೇರಿಗೆ ಬರೋದು ಬೇಡ’
ಬಿಜೆಪಿ ಜೆಡಿಎಸ್ ಹೊಂದಾಣಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ರಾಘವೇಂದ್ರ, ಬಿಜೆಪಿ ಜೆಡಿಎಸ್ ಹೊಂದಾಣಿಕೆ ಬಗ್ಗೆ ಮಾಧ್ಯಮದಲ್ಲಿ ನೋಡಿದ್ದೇನೆ. ಈ ಬಗ್ಗೆ ರಾಜ್ಯ ಹಾಗೂ ಕೇಂದ್ರದ ನಾಯಕರಿಂದ ನಮಗೆ ಯಾವುದೇ ಮಾಹಿತಿ ಇಲ್ಲ, ಮೈತ್ರಿಯಾದರೆ ಅನುಕೂಲ ಆಗುತ್ತದೆ. ಬರಗಾಲದಲ್ಲೂ ಕೂಡ ಸರ್ಕಾರ ಸ್ಪಂದನೆ ಮಾಡುತ್ತಿಲ್ಲ. ಬಿಜೆಪಿ ಸರ್ಕಾರದ ಯೋಜನೆ ಕೈ ಬಿಟ್ಟಿದ್ದಾರೆ ಎಂದು ದೂರಿದ್ದಾರೆ.
ಈ ಬಾರಿ ಸರಾಸರಿ ಮಳೆ ಕಡಿಮೆಯಾಗಿದೆ. ಬರಗಾಲ ಘೋಷಣೆ ಮಾಡಲು ಹೇಳಿದರೂ ಸಹ ವಿಳಂಬ ಮಾಡುತ್ತಿದ್ದಾರೆ. ರೈತರ ಸಮಸ್ಯೆಗಳು ಇದ್ದರೂ ಸ್ಪಂದಿಸುತ್ತಿಲ್ಲ, ಸಚಿವರು ರೈತರ ಆತ್ಮಹತ್ಯೆಯ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಬರಗಾಲ ಘೋಷಣೆ ಮಾಡಬೇಕು, ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸಬೇಕು. ರೈತರಿಗೆ ಬೆಳೆ ವಿಮೆ ಕೊಡಬೇಕೆಂದು ಒತ್ತಾಯ ಮಾಡಿದ್ದಾರೆ.
ರೈತರ ಆತ್ಮಹತ್ಯೆಯ ಬಗ್ಗೆ ವರದಿಯಾಗಿಲ್ಲ. ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಪರಿಹಾರ ಸಿಕ್ಕಿಲ್ಲ. ರೈತರ ಆತ್ಮಹತ್ಯೆ ವರದಿ ಪಡೆದು ಶೀಘ್ರವಾಗಿ ಪರಿಹಾರ ನೀಡಬೇಕು. ಬೇರ, ಬೇರೆ ಕಾರಣಕ್ಕೆ ಆತ್ಮಹತ್ಯೆ ಆಗಿದ್ದರೆ ಪರಿಶೀಲನೆ ನಡೆಸಲಿ. ಆತ್ಮಹತ್ಯೆಗೆ ಪರಿಹಾರ ನೀಡುವ ವಿಷಯದಲ್ಲಿ ಅಧಿಕಾರಿಗಳು ತಾರತಮ್ಯ ಮಾಡುತ್ತಾರೆ ಎಂದು ಆರೋಪಿಸಿದ್ದಾರೆ.
ರೈತರ ವಿಚಾರದಲ್ಲಿ ಸರ್ಕಾರ ಚೆಲ್ಲಾಟ ಆಡಬಾರದು. ಸರ್ಕಾರ ಇದೆ ಎಂದು ಅನಿಸುತ್ತಿಲ್ಲ. ಸಚಿವರಿಗೆ ಹೊಸ ಕಾರು ಖರೀದಿಗೆ ಮುಂದಾಗಿದ್ದಾರೆ. ಗ್ಯಾರಂಟಿ ಯೋಜನೆಗೆ ವಿವಿಧ ಯೋಜನೆಯ ಹಣ ಬಳಸಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿರುವ 28 ಲೋಕಸಭಾ ಸ್ಥಾನಗಳನ್ನು ಗೆಲ್ಲುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.