ಬೆಂಗಳೂರು: ನನಗೆ ನೋಟಿಸ್ ಕೊಟ್ಟಿದ್ದಾರೆ, ಅದಕ್ಕೆ ನಾನು ಸಭೆಗೆ ಹೋಗಿಲ್ಲಾ ಎಂದು ಬಿಜೆಪಿ ಮಾಜಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಸಭೆಗೆ ಗೈರಾದ ಹಿನ್ನೆಲೆ ಪ್ರತಿಕ್ರಿಯಿಸಿರುವ ಅವರು, ನಾನು ಏನು ಹೇಳಬೇಕೋ ಅದನ್ನು ಹೇಳಿದ್ದೀನಿ ಅದಕ್ಕೆ ನನಗೆ ನೋಟಿಸ್ ನೀಡಿದ್ದಾರೆ. ನೋಟಿಸ್ ವಾಪಸ್ ಪಡೆಯಬೇಕು ಅದಕ್ಕೆ ನಾನು ಸಭೆಗೆ ಹೋಗಿಲ್ಲ ಎಂದಿದ್ದಾರೆ.
ನನಗೆ ವೈಯಕ್ತಿಕವಾಗಿ ಲಾಭವೂ ಇಲ್ಲ, ನಷ್ಟವೂ ಇಲ್ಲ. ನಾನೊಬ್ಬ ಸಾಮಾನ್ಯ ಕಾರ್ಯಕರ್ತ, ಯಡಿಯೂರಪ್ಪ ಅವರಂತ ನಾಯಕರನ್ನ ಕಡೆಗಣಿಸಿದ್ದಾರೆ. ಇದು ಬಿಜೆಪಿಗೆ ಶಾಪವಾಗಿದೆ. ವರ್ಚಸ್ಸು ಇರುವವರನ್ನು ಬೆಳೆಯೋಕೆ ಬಿಡ್ತಿಲ್ಲಾ. ವಿಜಯೇಂದ್ರ ಅಂತವರನ್ನು ಮೂಲೆಗುಂಪು ಮಾಡ್ತಿದ್ದಾರೆ. ಇದನ್ನು ನಾನು ನೇರವಾಗಿ ಮಾತನಾಡಿದ್ದೇನೆ. ಅದಕ್ಕೆ ಶಿಸ್ತು ಕ್ರಮ ತೆಗೆದುಕೊಂಡಿದ್ದಾರೆ. ನಾನೇನು ಮೋದಿ, ಅಮಿತ್ ಶಾ, ಪಕ್ಷದ ವಿರುದ್ಧ ಮಾತನಾಡಿಲ್ಲ ಎಂದಿದ್ದಾರೆ.
ಇದನ್ನೂ ಓದಿ: ಪ್ರಮಾಣ ವಚನ ಸ್ವೀಕರಿಸಿದ ನೂತನ ಪರಿಷತ್ ಸದಸ್ಯರು!
ರಾಜ್ಯದ ಜನತೆಗೆ ತಪ್ಪು ಸಂದೇಶ ಹೋಗಿದೆ. ವಿಪಕ್ಷ ಹಾಗೂ ಅಧ್ಯಕ್ಷ ಸ್ಥಾನ ಇನ್ನೂ ಆಯ್ಕೆಯಾಗಿಲ್ಲಾ, ಇದನ್ನ ನಾಲ್ಕು ಗೋಡೆಗಳ ಮಧ್ಯೆ ಚರ್ಚೆ ಮಾಡಬೇಕು. ಕೆಲವರು ದುರಹಂಕಾರ, ಭ್ರಮಾ ಲೋಕದಲ್ಲಿವರಂತೆ ಆಡ್ತಾರೆ. ಅದಕ್ಕೆ ಈ ಪಕ್ಷಕ್ಕೆ ಹಿನ್ನಡೆಯಾಗಿದೆ. ಲೋಕಸಭೆಗೆ ಈ ರೀತಿಯಾಗಬಾರದು ಅನ್ನೋದು ನಮ್ಮ ಉದ್ದೇಶ. ಪಕ್ಷದಲ್ಲಿ ಸಂಘಟನೆ ಕೊರತೆ ಇದೆ, ಇದು ಸರಿಯಾಗಬೇಕು ಎಂದಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.