Sunday, March 26, 2023
spot_img
- Advertisement -spot_img

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150ಕ್ಕೂ ಹೆಚ್ಚಿನ ಸ್ಥಾನ ಗೆದ್ದೇ ಗೆಲ್ಲುತ್ತೇವೆ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವಿಶ್ವಾಸ

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150ಕ್ಕೂ ಅಧಿಕ ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವಿಶ್ವಾಸ ವಕ್ತಪಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದ ನಾಲ್ಕು ದಿಕ್ಕುಗಳಿಂದ ರಥಯಾತ್ರೆಯನ್ನು ಫೆಬ್ರವರಿ ಅಂತ್ಯದಲ್ಲಿ ಆರಂಭಿಸಲು ರೂಪರೇಷೆ ಸಿದ್ಧತೆ ಬಗ್ಗೆಯೂ ಸಮಾಲೋಚನೆ ನಡೆಸಲಾಗಿದ್ದು, ಪ್ರಧಾನಿಯವರ ಕಲಬುರಗಿ, ಹುಬ್ಬಳ್ಳಿ ಕಾರ್ಯಕ್ರಮಗಳಿಗೆ ನಿರೀಕ್ಷೆಗೆ ಮೀರಿದ ಜನಸಾಗರ ಬಂದಿದೆ. ವಿವಿಧ ಸಮಾವೇಶಗಳಲ್ಲೂ ಗರಿಷ್ಠ ಜನರು ಸೇರುತ್ತಿದ್ದಾರೆ. ಈ ಬಿಜೆಪಿ ಪರ ವಾತಾವರಣ ಇನ್ನಷ್ಟು ಗಟ್ಟಿಮಾಡುವ ಕೆಲಸ ರೈತ ಮೋರ್ಚಾದಿಂದ ಆಗಬೇಕು ಎಂದರು.

ಬಿಜೆಪಿ ಸರ್ಕಾರಗಳು ರೈತಪರ ನಿಲುವು ತೆಳೆದು ರೈತರ ಏಳಿಗೆಗೆ ಶ್ರಮಿಸಿವೆ. ಬಿಜೆಪಿ ನೇತೃತ್ವದ ಡಬಲ್ ಎಂಜಿನ್‌ ಸರ್ಕಾರಗಳು ಮಾಡಿದ ಸಾಧನೆ ಮತ್ತು ರೈತಪರ ಕೆಲಸಗಳ ಬಗ್ಗೆ ಜನರು ಮತ್ತು ರೈತರಿಗೆ ತಿಳಿಸಬೇಕು ಎಂದು ಹೇಳಿದರು.

ಮುಖ್ಯಮಂತ್ರಿ ಸಿಎಂ ಬೊಮ್ಮಾಯಿ ಮಾತನಾಡಿ, ಬರುವ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮಗಳು, ಅಧಿವೇಶನದ ಜೊತೆ ಜೊತೆಗೆ ಪಕ್ಷದ ಸಂಘಟನೆ, ಫೆಬ್ರವರಿ ಅಂತ್ಯದವರೆಗೆ ಜನ ಸಂಕಲ್ಪ ಯಾತ್ರೆ ಮುಂದುವರೆಸುವುದು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಪ್ರಣಾಳಿಕೆ ಸಿದ್ಧಪಡಿಸುವುದು, ರಾಷ್ಟ್ರೀಯ ನಾಯಕರ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.

Related Articles

- Advertisement -

Latest Articles