Monday, December 4, 2023
spot_img
- Advertisement -spot_img

ಮಧ್ಯಪ್ರದೇಶದಲ್ಲಿ ಈ ಬಾರಿ ಕಾಂಗ್ರೆಸ್‌ ‘ಬಿರುಗಾಳಿ’ ಬೀಸಲಿದೆ: ರಾಹುಲ್‌ ಗಾಂಧಿ

ಭೋಪಾಲ್ : ಈ ಬಾರಿಯ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್‌ ತೂಫಾನ್‌ (ಬಿರುಗಾಳಿ) ಬೀಸಲಿದೆ ಎಂದು ರಾಹುಲ್‌ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಧ್ಯಪ್ರದೇಶದ ವಿದಿಶಾದಲ್ಲಿ ಮಂಗಳವಾರ ಕಾಂಗ್ರೆಸ್‌ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, 2018ರ ವಿಧಾನಸಭೆ ಚುನಾವಣೆಯ ನಂತರ ರಚನೆಯಾದ ಕಾಂಗ್ರೆಸ್‌ ಸರ್ಕಾರವನ್ನು ಶಾಸಕರನ್ನು ಖರೀದಿಸುವ ಮೂಲಕ ಬಿಜೆಪಿ ಉರುಳಿಸಿದೆ ಎಂದು ಆರೋಪಿಸಿದರು. ಪ್ರಧಾನಿ ಮೋದಿ ರಾಜ್ಯದ ಜನರ ಧ್ವನಿ ಅಡಗಿಸುವ ಮೂಲಕ ಮೋಸ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ : ಪ್ರಧಾನಿ ಮೋದಿ ವಿರುದ್ಧ ಸುಳ್ಳು ಹೇಳಿಕೆ; ಪ್ರಿಯಾಂಕಾ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ

ಐದು ವರ್ಷಗಳ ಹಿಂದೆ ನೀವೆಲ್ಲರೂ ಕಾಂಗ್ರೆಸ್ ಪಕ್ಷದ ಸರ್ಕಾರವನ್ನು ಆಯ್ಕೆ ಮಾಡಿದ್ದೀರಿ. ಆದರೆ, ಬಿಜೆಪಿ ನಾಯಕರಾದ ನರೇಂದ್ರ ಮೋದಿ, ಶಿವರಾಜ್ ಸಿಂಗ್ ಚೌಹಾಣ್ ಮತ್ತು ಅಮಿತ್ ಶಾ ಒಟ್ಟಾಗಿ ಕಾಂಗ್ರೆಸ್‌ ಶಾಸಕರನ್ನು ಖರೀದಿಸಿ ಮಧ್ಯಪ್ರದೇಶದ ಚುನಾಯಿತ ಸರ್ಕಾರವನ್ನು ಉರುಳಿಸಿದರು. ಕೋಟ್ಯಂತರ ರೂಪಾಯಿ ಕೊಟ್ಟು ಕಾಂಗ್ರೆಸ್ ಪಕ್ಷದ ಶಾಸಕರನ್ನು ಖರೀದಿಸುವ ಮೂಲಕ ನಿಮ್ಮ ನಿರ್ಧಾರ, ನಿಮ್ಮ ಹೃದಯದ ಧ್ವನಿಯನ್ನು ಬಿಜೆಪಿ ನಾಯಕರು, ಪ್ರಧಾನಿ ಅಡಗಿಸಿದ್ದಾರೆ. ಈ ಮೂಲಕ ನಿಮಗೆ ಮೋಸ ಮಾಡಿದ್ದಾರೆ ಎಂದು ರಾಹುಲ್‌ ಗಾಂಧಿ ಹೇಳಿದರು.

ಕಾಂಗ್ರೆಸ್‌ ತೂಫಾನ್ ಬೀಸಲಿದೆ: ಒಟ್ಟು 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಪಕ್ಷವು ಈ ಬಾರಿ ಸುಮಾರು 145 ರಿಂದ 150 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದ ರಾಹುಲ್ ಗಾಂಧಿ, ರಾಜ್ಯದ ವಿವಿಧ ಭಾಗಗಳಿಗೆ ನಾನು ಭೇಟಿ ನೀಡಿದ್ದು, ಈ ನೆಲದಲ್ಲಿ ಕಾಂಗ್ರೆಸ್‌ನ ‘ಬಿರುಗಾಳಿ’ ಬೀಸಲಿದೆ ಎಂದಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles