ಬೆಳಗಾವಿ : ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕಿಯರಿಬ್ಬರು ವಿನೂತನವಾಗಿ ಮತದಾರರನ್ನು ಸೆಳೆಯುತ್ತಿದ್ದು, ಚುನಾವಣೆ ಘೋಷಣೆಗೂ ಮುನ್ನವೇ ಬೆಳಗಾವಿಯ ನಾಲ್ಕು ಕ್ಷೇತ್ರಗಳಲ್ಲಿ ಈಗಿನಿಂದಲೇ ಗಿಫ್ಟ್ ಪಾಲಿಟಿಕ್ಸ್ ಆರಂಭವಾಗಿದೆ.
ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ಜನರಿಗೆ ನಾನಾ ಬಗೆಯ ಗಿಫ್ಟ್ ನೀಡಲಾಗುತ್ತಿದೆ. ಯುವ ಸಮೂಹ, ಮಹಿಳಾ ಮತದಾರರನ್ನು ಗಮನದಲ್ಲಿಟ್ಟುಕೊಂಡು ಲಂಚ್ ಬಾಕ್ಸ್, ಸೀರೆ, ಕನ್ನಡಕ, ಪಿಯು ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಮಾಡಲಾಗುತ್ತಿದೆ.
ಶಾಸಕಿ ಅಂಜಲಿ ನಿಂಬಾಳ್ಕರ್, ಬಿಜೆಪಿ ಟಿಕೆಟ್ ಆಕಾಂಕ್ಷಿ ಡಾ.ಸೋನಾಲಿ ಸೋನಬರ್ತ್ ಇಬ್ಬರೂ ಮತದಾರರನ್ನು ಒಲಿಸಿಕೊಳ್ಳುವಲ್ಲಿ ನಿರತರಾಗಿದ್ದಾರೆ. ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅರಿಶಿನ ಕುಂಕುಮ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ಹಾಗೂ ಮಹಿಳೆಯರಿಗೆ ಉಚಿತ ಲಂಚ್ ಬಾಕ್ಸ್ ವಿತರಣೆ ಮಾಡುತ್ತಿದ್ದಾರೆ. ಇತ್ತ ಬಿಜೆಪಿ ಟಿಕೆಟ್ ಆಕಾಂಕ್ಷಿ ಎ.ದಿಲೀಪಕುಮಾರ್ ಮಹಿಳೆಯರಿಗೆ ಸೀರೆ ಗಿಫ್ಟ್ ಮಾಡುತ್ತಿದ್ದಾರೆ.
ಅರಿಶಿನ ಕುಂಕುಮ ಕಾರ್ಯಕ್ರಮ ಏರ್ಪಡಿಸಿ ಸೀರೆ ಗಿಫ್ಟ್ ನೀಡುತ್ತಿದ್ದಾರೆ. ಮತ್ತೋರ್ವ ಬಿಜೆಪಿ ಟಿಕೆಟ್ ಆಕಾಂಕ್ಷಿ ಡಾ.ಸೋನಾಲಿ ಸೋನಬರ್ತ್, ಕಣ್ಣಿನ ತಪಾಸಣೆ ಶಿಬಿರಗಳನ್ನು ಆಯೋಜಿಸಿ ಉಚಿತ ಕನ್ನಡಕ ಗಿಫ್ಟ್ ನೀಡಿದ್ದಾರೆ.