Wednesday, March 22, 2023
spot_img
- Advertisement -spot_img

ಹಾಲಿ ನಾಲ್ಕಾರು ಶಾಸಕರಿಗೆ ಟಿಕೆಟ್ ಕೈ ತಪ್ಪಬಹುದು : ಮಾಜಿ ಸಿಎಂ ಬಿಎಸ್ ವೈ

ಕಲಬುರಗಿ: ತ್ರಿಪುರಾ, ಮೇಘಾಲಯ ಚುನಾವಣೆಯಲ್ಲಿ ಬಿಜೆಪಿ ಶಕ್ತಿ ಏನು ಎಂಬುದು ಸಾಬೀತಾಗಿದೆ. ಇದರ ಜೊತೆಗೆ ಕಾಂಗ್ರೆಸ್ ಅಡ್ರೆಸ್ ಕಳೆದುಕೊಂಡಿರುವುದು ಮತ್ತೊಮ್ಮೆ ದೃಢಪಟ್ಟಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.

ಟಿಕೆಟ್ ವಿಚಾರವಾಗಿ ಪ್ರತಿಕ್ರಿಯಿಸಿ, ಹಾಲಿ ನಾಲ್ಕಾರು ಶಾಸಕರಿಗೆ ಟಿಕೆಟ್ ಕೈ ತಪ್ಪಬಹುದು, ಇನ್ನುಳಿದ ಹಾಲಿ ಶಾಸಕರಿಗೆ ಟಿಕೆಟ್ ಸಿಗುವ ಸಂಭವ ಹೆಚ್ಚಿದೆ ಎಂದು ತಿಳಿಸಿದರು.ಇದೇ ವೇಳೆ, ರಾಜ್ಯಾದ್ಯಂತ 140ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಬಿಜೆಪಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಸಚಿವ ವಿ.ಸೋಮಣ್ಣ ಹಾಗೂ ನಾರಾಯಣ ಗೌಡ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಅವರಷ್ಟೇ ಅಲ್ಲ ಯಾರೊಬ್ಬರೂ ಪಕ್ಷ ಬಿಡುವುದಿಲ್ಲ ಎಂದು ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣೆ ಮುಗಿದ ಬಳಿಕ ನಡೆಯುವ ಪಕ್ಷದ ಶಾಸಕಾಂಗ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದು ನಿರ್ಧಾರ ಆಗಲಿದೆ ಎಂದು ಪ್ರತಿಕ್ರಿಯಿಸಿದರು. ಮೋದಿ ಬಗ್ಗೆ ಹಗುರವಾಗಿ ಮಾತಾಡದಂತೆ ಖರ್ಗೆಯವರಿಗೆ ನಾನು ವಿನಂತಿಸಿಕೊಳ್ಳುತ್ತೇ‌ನೆ ಎಂದು ಹೇಳಿದರು.

Related Articles

- Advertisement -

Latest Articles