ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆ ಸ್ಪರ್ದಿಸಲು, ಪಕ್ಷ ಸಂಘಟನೆಗಾಗಿ ಇಂದು ಸಿಲಿಕಾನ್ ಸಿಟಿಯಲ್ಲಿ ಜೆಡಿಎಸ್ ಸಮಾವೇಶ ನಡೆಯಲಿದೆ.
ಇದನ್ನೂ ಓದಿ : ಮಾಜಿ ರಾಷ್ಟ್ರಪತಿ ಕಲಾಂ ಅವಹೇಳನ : ಅರ್ಚಕನ ವಿರುದ್ಧ ಬಿತ್ತು ಕೇಸ್!
ನಗರದ ಅರಮನೆ ಮೈದಾನದ ನಲಪಾಡ್ ಪೆವಿಲಿಯನ್ ನಲ್ಲಿ ಸಮಾವೇಶ ನಡೆಯಲಿದ್ದು, ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಈ ಕಾರ್ಯಕ್ರಮ ನೆರವೇರಲಿದೆ. ಸಮಾವೇಶದಲ್ಲಿ ಜೆಡಿಎಸ್ ಪಕ್ಷದ ಹಾಲಿ ಮತ್ತು ಮಾಜಿ ಸಚಿವರು ಹಾಗೂ ಶಾಸಕರು ಭಾಗಿಯಾಗಲಿದ್ದಾರೆ.
ಇದನ್ನೂ ಓದಿ : ಮೈತ್ರಿ ಬಗ್ಗೆ ಕುಮಾರಣ್ಣ ಜೊತೆಗೆ ನಾಳೆ ಸಭೆ ಇದೆ : ಹರೀಶ್ ಗೌಡ
ಆಪರೇಷನ್ ಹಸ್ತ ರಾಜ್ಯದಲ್ಲಿ ಸುದ್ದಿ ಮಾಡುತ್ತಿರುವ ಬೆನ್ನಲ್ಲೇ, ಮುಳುಗುತ್ತಿರುವ ದೋಣಿಯಂತಾಗಿರುವ ಜೆಡಿಎಸ್, ಮುಂಬರುವ ಲೋಕಸಭಾ, ಜಿಲ್ಲಾ, ತಾಲೂಕು ಹಾಗೂ ಪಂಚಾಯಿತಿ ಸೇರಿದಂತೆ ಬಿಬಿಎಂಪಿ ಚುನಾವಣೆಗಳಲ್ಲಿ ಪಾಲ್ಗೊಳ್ಳಲು ಪಕ್ಷವನ್ನು ಬಲ ಪಡಿಸುವ ನಿಟ್ಟಿನಲ್ಲಿ ಈ ಸಭೆಯನ್ನು ನಡೆಸಲಿದೆ. ಪಕ್ಷದ ಬೆಳವಣಿಗೆಗಾಗಿ ಹೇಗೆಲ್ಲ ಶ್ರಮಿಸಬೇಕು, ಪಕ್ಷಕ್ಕಾಗಿ ಮಾಡಬೇಕಾದ ಕೆಲಸಗಳ ಬಗ್ಗೆ ಚರ್ಚೆ ನಡೆಸಲಿದ್ದು, ಪಕ್ಷದ ಮುಂದಿನ ನಡೆಯ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.
ಇದನ್ನೂ ಓದಿ : ʼಕಾರ್ಕಳ ಪ್ರವಾಸೋದ್ಯಮದ ಬಗ್ಗೆ ಅಪಹಾಸ್ಯ ಮಾಡಲಾಗ್ತಿದೆʼ
ಈ ಕಾರ್ಯಕ್ರಮದಲ್ಲಿ ಸಾವಿರಾರು ಜೆಡಿಎಸ್ ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.