Wednesday, March 22, 2023
spot_img
- Advertisement -spot_img

5 ಕಡೆ 1 ಸಾವಿರ ಎಕರೆ ಪ್ರದೇಶದಲ್ಲಿ ಟೌನ್‌ಶಿಪ್‌ ನಿರ್ಮಿಸಲಾಗುವುದು : ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ರಾಜ್ಯದಲ್ಲಿ ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿಯಲ್ಲಿ ಕೈಗಾರಿಕಾ ಟೌನ್ ಶಿಪ್ ಸ್ಥಾಪಿಸಲು ಉದ್ದೇಶಿಸಲಾಗಿದೆ. ಪ್ರತಿ ಕಡೆಯೂ ತಲಾ 1 ಸಾವಿರ ಎಕರೆ ಪ್ರದೇಶದಲ್ಲಿ ಟೌನ್ ನಿರ್ಮಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಬಂಡವಾಳ ಹೂಡಿಕೆದಾರರ ಓಡಂಬಡಿಕೆ ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಬೆಂಗಳೂರು ನಂತರ ಕೈಗಾರಿಕಾ ಬೆಳವಣಿಗೆಗೆ ಅತ್ಯಂತ ಪ್ರಶಸ್ತವಾದ ನಗರವೆಂದರೆ ಅದು ಹುಬ್ಬಳ್ಳಿ-ಧಾರವಾಡ, ಚಿತ್ರದುರ್ಗ, ದಾವಣಗೆರೆ, ಬೆಳಗಾವಿಯಲ್ಲಿ ಈಗಾಗಲೇ ಜಾಗ ಗುರುತಿಸಲಾಗಿದೆ. ಧಾರವಾಡ ಹಾಗೂ ಹಾವೇರಿಯಲ್ಲಿ ಜಾಗ ಗುರುತಿಸಲಾಗುವುದು ಎಂದು ತಿಳಿಸಿದ್ದಾರೆ. ಮುಂಬೈ- ಚೆನ್ನೈ ಕೈಗಾರಿಕಾ ಕಾರಿಡಾರ್‌ ಸ್ಥಾಪನೆಯಿಂದ ರಾಜ್ಯದಲ್ಲಿ ಲಕ್ಷಾಂತರ ಉದ್ಯೋಗ ಸೃಷ್ಟಿಯಾಗಲಿವೆ. ಅದಕ್ಕೆ ಪೂರಕ ವಾತಾವರಣ ನಿರ್ಮಿಸುವ ಉದ್ದೇಶದಿಂದ ಐದು ಕಡೆ 1 ಸಾವಿರ ಎಕರೆ ಪ್ರದೇಶದಲ್ಲಿ ಟೌನ್‌ಶಿಪ್‌ ನಿರ್ಮಿಸಲಾಗುವುದು”ಎಂದರು.
”890 ಕೋಟಿ ರೂ. ವೆಚ್ಚದ ಧಾರವಾಡ-ಬೆಳಗಾವಿ ರೈಲು ಮಾರ್ಗ ನಿರ್ಮಾಣ ಯೋಜನೆಯನ್ನು ಇದೇ ವರ್ಷ ಆರಂಭಿಸಲಾಗುವುದು. ರೈಲ್ವೆ ಯೋಜನೆಗಳಿಗೆ ಶೇ.50ರಷ್ಟು ಅನುದಾನ ಭರಿಸಲು ರಾಜ್ಯ ಸರಕಾರ ಸಿದ್ಧವಿದೆ. ಧಾರವಾಡ- ಬೆಂಗಳೂರು ವಂದೇ ಭಾರತ ರೈಲು ಸಂಚಾರ ಶೀಘ್ರ ಆರಂಭವಾಗಲಿದೆ”ಎಂದು ತಿಳಿಸಿದರು. ಈಗಾಗಲೇ ಚಿತ್ರದುರ್ಗ, ದಾವಣಗೆರೆ, ಬೆಳಗಾವಿಯಲ್ಲಿ ಜಾಗೆ ಗುರುತಿಸಲಾಗಿದ್ದು, ಧಾರವಾಡ ಹಾಗೂ ಹಾವೇರಿಯಲ್ಲಿಜಾಗೆ ಗುರುತಿಸುವ ಕೆಲಸ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ಬೆಂಗಳೂರು ನಂತರ ಹುಬ್ಬಳ್ಳಿ-ಧಾರವಾಡ ಕೈಗಾರಿಕೆ ಬೆಳವಣಿಗೆಗೆ ಸೂಕ್ತ ಪ್ರದೇಶವಾಗಿದೆ. ನಮ್ಮ ಸರಕಾರ ಬಿಯಾಂಡ್‌ ಬೆಂಗಳೂರು ಯೋಜನೆಯಡಿ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಅನ್ಯ ಜಿಲ್ಲೆಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ ನೀಡುತ್ತಿದೆ”ಎಂದು ತಿಳಿಸಿದರು.ರಾಜ್ಯದ ಕೆಲ ರೈಲ್ವೆ ಯೋಜನೆಗಳ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕು ನೀಡಲಾಗಿದೆ. ಈಗಾಗಲೇ ತುಮಕೂರು- ದಾವಣಗೆರೆ ರೈಲ್ವೆ ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ಧಾರವಾಡ- ಬೆಳಗಾವಿ ರೈಲು ಮಾರ್ಗಕ್ಕೆ ಬೇಕಾದ ಭೂಸ್ವಾಧಿಧೀನ ಪ್ರಕ್ರಿಯೆ ನಡೆಯುತ್ತಿದೆ. ಇನ್ನು ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗದ ಯೋಜನೆಗೂ ಶೀಘ್ರದಲ್ಲೇ ಹಸಿರು ನಿಶಾನೆ ಸಿಗಲಿದೆ”ಎಂದು ವಿಶ್ವಾಸ ವ್ಯಕ್ತಪಡಿಸಿದರು.

Related Articles

- Advertisement -

Latest Articles