Wednesday, March 22, 2023
spot_img
- Advertisement -spot_img

ಕಾಂಗ್ರೆಸ್ ಪಕ್ಷದಿಂದ ಟ್ರ್ಯಾಕ್ಟರ್ ಯಾತ್ರೆ ; ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಯಾತ್ರೆಗೆ ಕಾಂಗ್ರೆಸ್‌ ನಾಯಕರು ತಯಾರಿ ನಡೆಸಲಿದ್ದು, ಯಾತ್ರೆಗೆ ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್ ಕೂಡ ಸಿಕ್ಕಿದೆ ಅನ್ನೋ ಮಾಹಿತಿ ಹೊರ ಬಿದ್ದಿದೆ. ಅಂದಹಾಗೇ ಭಾರತ್ ಜೋಡೋ ಯಾತ್ರೆ ಬಳಿಕ ಕಾಂಗ್ರೆಸ್ ಪಕ್ಷದಿಂದ ಟ್ರ್ಯಾಕ್ಟರ್ ಯಾತ್ರೆ ನಡೆಯಲಿದೆ.

ನವದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆಗೆ ನಡೆದ ಸಭೆಯಲ್ಲಿ ಟ್ರ್ಯಾಕ್ಟರ್ ಯಾತ್ರೆಗೆ ಅನುಮತಿ ಸಿಕ್ಕಿದೆ. ಸಿದ್ದರಾಮಯ್ಯ ಪ್ರಸ್ತಾವನೆಗೆ ಹೈಕಮಾಂಡ್ ಒಪ್ಪಿದೆ ಅಂತ ತಿಳಿದು ಬಂದಿದೆ. ಈ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ವಿಷಯಧಾರಿಯ ಯಾತ್ರೆ ಮಾಡಬೇಕು ಅನ್ಕೊಂಡಿದ್ದೇವೆ. ಮಹದಾಯಿ, ಕೃಷ್ಣ ಮೇಲ್ದಂಡೆ, ಮೇಕೆದಾಟು ವಿಚಾರಗಳು ಮತ್ತು ಸ್ಥಳೀಯ ಸಮಸ್ಯೆ ಇಟ್ಟುಕೊಂಡು ಯಾತ್ರೆ ಮಾಡಲಿದ್ದೇವೆ.

ಟ್ರ್ಯಾಕ್ಟರ್‌ನಲ್ಲಿ ಯಾತ್ರೆ ಮಾಡಬೇಕು ಅಂದುಕೊಂಡಿದ್ದೇವೆ. ಜತೆಗೆ ವಿಧಾನಸಭೆ ಚುನಾವಣೆಗೆ ನವೆಂಬರ್ ಅಂತ್ಯದಲ್ಲಿ ಮೊದಲ ಪಟ್ಟಿ ಬಿಡುಗಡೆಗೆ ಹೈಕಮಾಂಡ್‌ಗೆ ಮನವಿ ಮಾಡಲಾಗಿದೆ ಅಂತ ತಿಳಿಸಿದ್ದಾರೆ. ದಿನಕ್ಕೆ ಎರಡು ಕ್ಷೇತ್ರಗಳು ತಲುಪೋ ಪ್ಲಾನ್ ಕಾಂಗ್ರೆಸ್‌ನದ್ದಾಗಿದೆ. ರಾಜ್ಯದಲ್ಲಿ ಮೀಟಿಂಗ್ ಮಾಡಿ ಯಾತ್ರೆಗೆ ದಿನಾಂಕ ನಿಗದಿಯಾಗಲಿದೆ. ಬೀದರ್‌ ಜಿಲ್ಲೆಯ ಬಸವಕಲ್ಯಾಣದಿಂದ ಸಿದ್ದರಾಮಯ್ಯ 371 ಜೆ ಯಾತ್ರೆ ಆರಂಭಿಸುವ ಸಾಧ್ಯತೆ ಇದೆ. ಇನ್ನು ಮಹಾದಾಯಿ ಹೋರಾಟದ ಮುಂದಾಳತ್ವ ಡಿಕೆಶಿ ವಹಿಸುವ ಸಾಧ್ಯತೆ ಇದೆ.

ರಾಜ್ಯಾದ್ಯಂತ ಏಕಕಾಲದಲ್ಲಿ ಎರಡು ಕಡೆಯಿಂದ ಯಾತ್ರೆ ನಡೆಯಲಿದೆ. ಯಾವ ಯಾತ್ರೆಗೆ ಯಾವ ನಾಯಕರ ನೇತೃತ್ವದಲ್ಲಿ ಎಂಬುದನ್ನು ಕೆಪಿಸಿಸಿ ಅಧ್ಯಕ್ಷರ ನಿರ್ಧಾರ ಬಿಟ್ಟಿದೆ ಹೈಕಮಾಂಡ್. ಸಿದ್ದರಾಮಯ್ಯ ಎಲ್ಲಿ ಯಾತ್ರೆ ಮಾಡಬೇಕು ಎಂಬುದನ್ನು ಡಿ.ಕೆ. ಶಿವಕುಮಾರ್‌ ನಿರ್ಧರಿಸಲಿದ್ದಾರೆ. ಬಹುತೇಕ ಉತ್ತರ ಕರ್ನಾಟಕದಲ್ಲಿ ಸಿದ್ದರಾಮಯ್ಯ ಯಾತ್ರೆ ನಡೆಯಲಿದೆ. ಡಿ.ಕೆ ಶಿವಕುಮಾರ್ ಮತ್ತೊಂದು ಭಾಗದ ಯಾತ್ರೆ ಮಾಡಲು ತಯಾರಿ ನಡೆಸಿದ್ದಾರೆ ಅಂತ ತಿಳಿದು ಬಂದಿದೆ.

Related Articles

- Advertisement -

Latest Articles