ಬೆಂಗಳೂರು: ಕೆಎಸ್‌ಆರ್‌ಟಿಸಿ ಹಾಗೂ ಇತರೆ ನಿಗಮಗಳಿಗೆ 13 ಸಾವಿರ ಸಿಬ್ಬಂದಿ ನೇಮಕ ಹಾಗೂ 4 ಸಾವಿರ ಬಸ್‌ಗಳನ್ನು ಖರೀದಿಸ ಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಕೆಎಸ್‌ಆರ್‌ಟಿಸಿ ಎಸ್‌ಸಿ/ಎಸ್‌ಟಿ ಅಧಿಕಾರಿಗಳ ಮತ್ತು ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಶನಿವಾರ ನಡೆದ ಡಾ. ಬಿಆರ್ ಅಂಬೇಡ್ಕರ್ ಜನ್ಮ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು. ಸದ್ಯ ಎಲ್ಲಾ ನಿಗಮಗಳಲ್ಲಿ 11,000 ಸಿಬ್ಬಂದಿ ನಿವೃತ್ತಿ ಹೊಂದಿದ್ದು, ಕಳೆದ ಏಳು ವರ್ಷಗಳಿಂದ ಚಾಲಕರು, ಕಂಡಕ್ಟರ್‌ಗಳು ಮತ್ತು ಮೆಕಾನಿಕ್‌ಗಳ ನೇಮಕಾತಿ ನಡೆದಿಲ್ಲ ಎಂದು ಹೇಳಿದರು.
ಇದನ್ನೂ ಓದಿ : ವಿಜಯೇಂದ್ರಗೆ ಒಲಿಯಲಿದೆಯಾ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ?
ಇನ್ನು ಮುಂದುವರೆದು ಮಾತನಾಡಿದ ಅವರು, ‘ಹೊಸ ಬಸ್‌ಗಳನ್ನು ಖರೀದಿಸದ ಕಾರಣ, ಬಸ್ ಮಾರ್ಗಗಳ ಸಂಖ್ಯೆಯಲ್ಲೂ ಕಡಿಮೆಯಾಗಿದೆ. ನಾವು ಸಿಬ್ಬಂದಿ ನೇಮಕಾತಿ ಮತ್ತು ಬಸ್‌ಗಳ ಖರೀದಿಯನ್ನು ಪ್ರಾರಂಭಿಸಿದ್ದೇವೆ’ ಎಂದು ಹೇಳಿದರು.
ಇದನ್ನೂ ಓದಿ : Bengaluru Bandh : ಖಾಸಗಿ ಸಾರಿಗೆ ಸಂಸ್ಥೆಗಳಿಂದ ನಾಳೆ ‘ಬೆಂಗಳೂರು ಬಂದ್’ಗೆ ಕರೆ : ಏನಿರುತ್ತೆ-ಏನಿರಲ್ಲ?
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.