ಮೇಘಾಲಯ: ನಾಗಾಲ್ಯಾಂಡ್, ತ್ರಿಪುರಾ ಮತ್ತು ಮೇಘಾಲಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ.
ತ್ರಿಪುರಾದಲ್ಲಿ ಮುಖ್ಯಮಂತ್ರಿ ಮಾಣಿಕ್ ಸಹಾ ಮತ್ತು ಅವರ ಜೊತೆಗೆ ಬಿಜೆಪಿಯ ರತನ್ ಚಕ್ರವರ್ತಿ, ರತನ್ ಲಾಲ್ ನಾಥ್ ಮತ್ತು ಸುಶಾಂತ ಚೌಧರಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ನ ಸುದೀಪ್ ರಾಯ್ ಬರ್ಮನ್ ಕೂಡ ಮುನ್ನಡೆಯಲ್ಲಿದ್ದಾರೆ. ಹೀಗೆ ಮೇಘಾಲಯದಲ್ಲಿ ಎನ್‌ಪಿಪಿ ಆರಂಭಿಕ ಮುನ್ನಡೆ ಸಾಧಿಸಿದ್ದು, ತ್ರಿಪುರಾ ಮತ್ತು ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಆರಂಭಿಕ ಮುನ್ನಡೆ ಕಾಯ್ದುಕೊಂಡಿವೆ.
ಅರುಣಾಚಲ ಪ್ರದೇಶದಲ್ಲಿ ನಡೆದ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬೆಳಿಗ್ಗೆ ನಾಗಾಲ್ಯಾಂಡ್ ನಲ್ಲಿ ಬಿಜೆಪಿ 45 ಸ್ಥಾನ ಗಳಲ್ಲಿ ಮುನ್ನಡೆ ಸಾಧಿಸಿದೆ. ತ್ರಿಪುರಾ, ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ತಿಳಿಸಿವೆ.
ಅಷ್ಟೇ ಅಲ್ಲದೇ ಈಗಾಗಲೇ ನಾವೇ ಗೆಲ್ಲುತ್ತೇವೆ ಎಂಬ ಹುಮ್ಮಸ್ಸು ಬಿಜೆಪಿಗರಲ್ಲಿ ಕಾಣಿಸುತ್ತಿದ್ದು, ಬಿಜೆಪಿ ಗದ್ದುಗೆ ಏರಲಿದೆ. ಇದ್ರ ನಡುವೆ ಮೇಘಾಲಯ ಸಿಎಂ ಕರ್ನಾಡ್ ಸಂಗ್ಮಾ , ಅಸ್ಸಾಂ ಸಿಎಂ ಹಿಮಂತ್ ಬಿಸ್ವ ಶರ್ಮಾ ಭೇಟಿ ಮಾಡಿರೋ ವಿಚಾರ ಎಲ್ಲೆಡೆ ಕುತೂಹಲ ಕೆರಳಿಸಿದೆ.
ತ್ರಿಪುರ, ನಾಗಾಲ್ಯಾಂಡ್, ಮೇಘಾಲಯ ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಮಾರ್ಚ್ 2, 2023 ರಂದು ಘೋಷಣೆ ಮಾಡಲಾಗುತ್ತದೆ. ತ್ರಿಪುರಾದಲ್ಲಿ ಫೆಬ್ರವರಿ 16 ರಂದು ಮತದಾನ ನಡೆದಿದ್ದರೆ, ಮೇಘಾಲಯ ಮತ್ತು ನಾಗಾಲ್ಯಾಂಡ್ ರಾಜ್ಯಗಳಲ್ಲಿ ಫೆಬ್ರವರಿ 27ರಂದು ಮತದಾನ ಪೂರ್ಣಗೊಂಡಿದೆ.